3ನೇ ಟೆಸ್ಟ್: 443 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್, ದಿನದಾಟ ಅಂತ್ಯಕ್ಕೆ ಆಸ್ಟ್ರೇಲಿಯಾ 8/0
ಅಚ್ಚರಿ ಬೆಳವಣಿಗೆಯಲ್ಲಿ ಆಸ್ಚ್ರೇಲಿಯಾ ವಿರುದ್ಧ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 443 ರನ್ ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ.

Published On :
ಮೆಲ್ಹೋರ್ನ್: ಅಚ್ಚರಿ ಬೆಳವಣಿಗೆಯಲ್ಲಿ ಆಸ್ಚ್ರೇಲಿಯಾ ವಿರುದ್ಧ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 443 ರನ್ ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ.
2ನೇ ದಿನದಾಟದ ಮುಕ್ತಾಯಕ್ಕೆ ಕೇವಲ 10 ಓವರ್ ಗಳು ಬಾಕಿ ಇರುವಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾರತದ ಮೊದಲ ಇನ್ನಿಂಗ್ಸ್ ಅನ್ನು ಡಿಕ್ಲೇರ್ ಮಾಡಿದ್ದಾರೆ. ಭಾರತ ತಂಡ ವಿಕೆಟ್ ನಷ್ಟಕ್ಕೆ 443 ರನ್ ಗಳಿಸಿದ್ದು, ಹೇಜಲ್ ವುಡ್ ಬೌಲಿಂಗ್ ನಲ್ಲಿ ರವೀಂದ್ರ ಜಡೇಜಾ ಔಟ್ ಆಗುತ್ತಿದ್ದಂತೆಯೇ ವಿರಾಟ್ ಕೊಹ್ಲಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿ ಅಚ್ಚರಿ ಮೂಡಿಸಿದರು.
ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ ಬೃಹತ್ ಮೊತ್ತ ಪೇರಿಸುವ ನಿರೀಕ್ಷೆ ಇತ್ತು. ಅದರಂತೆ ಇಂದು ಚೇತೇಶ್ವರ ಪೂಜಾರ ಶತಕ ಸಿಡಿಸಿದರೆ, ನಾಯಕ ವಿರಾಟ್ ಕೊಹ್ಲಿ 82 ರನ್ ಗಳಿಸಿ ಔಟ್ ಆಗಿದ್ದರು. ಆ ಬಳಿಕ ಬಂದ ರಹಾನೆ 34 ರನ್ ಗಳಿಸಿ ನಿರ್ಗಮಿಸಿದರೆ, ರೋಹಿತ್ ಶರ್ಮಾ ಅಜೇಯ 63 ರನ್ ಕಲೆಹಾಕಿದರು. ರಹಾನೆ ಔಟಾದ ಬಳಿಕ ಕ್ರೀಸ್ ಗೆ ಬಂದ ರಿಷಬ್ ಪಂತ್ 39 ರನ್ ಗಳಿಸಿ ಸ್ಟಾರ್ಕ್ ಬೌಲಿಂಗ್ ನಲ್ಲಿ ನಿರ್ಗಮಿಸಿದರು. ಅಂತಿಮವಾಗಿ 4 ರನ್ ಗಳಿಸಿದ್ದ ರವೀಂದ್ರ ಜಡೇಜಾ ಹೇಜಲ್ ವುಡ್ ಬೌಲಿಂಗ್ ನಲ್ಲಿ ಔಟ್ ಆಗುತ್ತಿದ್ದಂತೆಯೇ ಕೊಹ್ಲಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿದರು.
ಆಸಿಸ್ ಪರ ಪ್ಯಾಟ್ ಕಮಿನ್ಸ್ 3 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್ 2 ಮತ್ತು ಹೇಜಲ್ ವುಡ್, ಲೈಯಾನ್ ತಲಾ 1 ವಿಕೆಟ್ ಪಡೆದರು.
ದಿನದಾಟ ಅಂತ್ಯಕ್ಕೆ ಆಸ್ಟ್ರೇಲಿಯಾ 8/0
ಇನ್ನು ಆಸಿಸ್ ತಂಡ ಕೂಡ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ್ದು, ದಿನದಾಟದ ಅಂತ್ಯಕ್ಕೆ ಕಾಂಗರೂಗಳು ವಿಕೆಟ್ ನಷ್ಟವಿಲ್ಲದೇ 8 ರನ್ ಗಳಿಸಿದ್ದಾರೆ. 5 ರನ್ ಗಳಿಸಿರುವ ಹ್ಯಾರಿಸ್ ಮತ್ತು 3 ರನ್ ಗಳಿಸಿರುವ ಫಿಂಚ್ 3ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕ್ರಿಕೆಟ್indiaಆಸ್ಟ್ರೇಲಿಯಾಟೀಂ ಇಂಡಿಯಾAustraliaVirat Kohliವಿರಾಟ್ ಕೊಹ್ಲಿMelbourneಮೆಲ್ಬೋರ್ನ್Cricket Offbeat
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


