ಕ್ರಿಕೆಟ್

ಮೆಲ್ಬೋರ್ನ್ ಟೆಸ್ಟ್: ಸೌರವ್ ಗಂಗೂಲಿ ದಾಖಲೆ ಮುರಿದ ಚೇತೇಶ್ವರ್ ಪೂಜಾರ ಶತಕ!

ಮೆಲ್ಬೋರ್ನ್ ಟೆಸ್ಟ್ ನಲ್ಲಿ ಚೇತೇಶ್ವರ್ ಪೂಜಾರ ಶತಕ ಸಿಡಿಸಿದ್ದು, ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್ ದಾಖಲೆಗಳನ್ನು ಸರಿಗಟ್ಟಿದ್ದಾರೆ.

ಮೆಲ್ಬೋರ್ನ್ ಟೆಸ್ಟ್: ಸೌರವ್ ಗಂಗೂಲಿ ದಾಖಲೆ ಮುರಿದ ಚೇತೇಶ್ವರ್ ಪೂಜಾರ ಶತಕ!
ಮೆಲ್ಬೋರ್ನ್ ಟೆಸ್ಟ್ : ದಾದಾ ದಾಖಲೆ ಮುರಿದ ಚೇತೇಶ್ವರ್ ಪೂಜಾರ ಶತಕ!
Published On :
ಮೆಲ್ಬೋರ್ನ್: ಮೆಲ್ಬೋರ್ನ್ ಟೆಸ್ಟ್ ನಲ್ಲಿ ಚೇತೇಶ್ವರ್ ಪೂಜಾರ ಶತಕ ಸಿಡಿಸಿದ್ದು, ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್ ದಾಖಲೆಗಳನ್ನು ಸರಿಗಟ್ಟಿದ್ದಾರೆ. 
ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ ನಡೆದ 3 ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಹಲವು ದಾಖಲೆಗಳನ್ನು ನಿರ್ಮಿಸಿದ್ದು, ಕ್ರಿಕೆಟ್ ವೃತ್ತಿ ಜೀವನದ 17 ನೇ ಶತಕ ದಾಖಲಿಸುವ ಮೂಲಕ ಪೂಜಾರ, ಸೌರವ್ ಗಂಗೂಲಿ ಅವರ ದಾಖಲೆ ಮುರಿದಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ 16 ಶತಕಗಳನ್ನು ದಾಖಲಿಸಿದ್ದರು. ಇದೇ ವೇಳೆ 17 ಶತಕಗಳನ್ನು ಹೊಂದಿದ್ದ ವಿವಿಎಸ್ ಲಕ್ಷ್ಮಣ್ ಅವರ  ದಾಖಲೆಯೊಂದಿಗೆ ಪೂಜಾರ ಸಮಬಲ ಸಾಧಿಸಿದ್ದಾರೆ. 
ಚೇತೇಶ್ವರ್ ಪೂಜಾರಾ 112 ಟೆಸ್ಟ್ ಇನ್ನಿಂಗ್ಸ್ ನಲ್ಲಿ 17 ಶತಕ ದಾಖಲಿಸಿದ್ದರು. ವಿವಿಎಸ್ ಲಕ್ಷ್ಮಣ್ 225 ಇನ್ನಿಂಗ್ಸ್ ನಲ್ಲಿ 17 ಶತಕ ದಾಖಲಿಸಿದ್ದರೆ, ಗಂಗೂಲಿ 188 ಟೆಸ್ಟ್ ಇನ್ನಿಂಗ್ಸ್ ನಲ್ಲಿ 16 ಶತಕ ದಾಖಲಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.