ಬಾಕ್ಸಿಂಗ್ ಡೇ ಟೆಸ್ಟ್: ಬಿಷನ್ ಸಿಂಗ್ ಬೇಡಿ ದಾಖಲೆ ಮುರಿದ ಇಶಾಂತ್ ಶರ್ಮಾ!
ಆಸ್ಟ್ರೇಲಿಯಾ ವಿರುದ್ದದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಜಯಿಸುವುದರೊಂದಿಗೆ ಟೀಂ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದ್ದು, ಇದೇ ಪಂದ್ಯದಲ್ಲಿ ಭಾರತದ ವೇಗಿ ಇಶಾಂತ್ ಶರ್ಮಾ ಕ್ರಿಕೆಟ್ ಲೆಜೆಂಡ್ ಬಿಷನ್ ಸಿಂಗ್ ಬೇಡಿ ಅವರ ದಾಖಲೆಯೊಂದನ್ನು ಹಿಂದಿಕ್ಕಿದ್ದಾರೆ.

Published On :
ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ದದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಜಯಿಸುವುದರೊಂದಿಗೆ ಟೀಂ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದ್ದು, ಇದೇ ಪಂದ್ಯದಲ್ಲಿ ಭಾರತದ ವೇಗಿ ಇಶಾಂತ್ ಶರ್ಮಾ ಕ್ರಿಕೆಟ್ ಲೆಜೆಂಡ್ ಬಿಷನ್ ಸಿಂಗ್ ಬೇಡಿ ಅವರ ದಾಖಲೆಯೊಂದನ್ನು ಹಿಂದಿಕ್ಕಿದ್ದಾರೆ.
ಹೌದು ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ 2 ವಿಕೆಟ್ ಪಡೆದ ಇಶಾಂತ್ ಶರ್ಮಾ ತಮ್ಮ ವಿಕೆಟ್ ಗಳಿಕೆಯನ್ನು 267ಕ್ಕೆ ಏರಿಸಿಕೊಂಡರು. ಆ ಮೂಲಕ ಭಾರತದ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ವಿಕೆಟ್ ಸಾಧನೆಗೈದ ಬೌಲರ್ ಗಳ ಪಟ್ಟಿಯಲ್ಲಿ ಇಶಾಂತ್ ಶರ್ಮಾ 6ನೇ ಸ್ಥಾನಕ್ಕೇರಿದ್ದಾರೆ. ಅಲ್ಲದೆ ಭಾರತೀಯ ಕ್ರಿಕೆಟ್ ನ ಲೆಜೆಂಡ್ ಆಟಗಾರ ಬಿಷನ್ ಸಿಂಗ್ ಬೇಡಿ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ಪಟ್ಟಿಯಲ್ಲಿ 619 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಅಗ್ರ ಸ್ಥಾನಿಯಾಗಿದ್ದು, ಅವರ ಬಳಿಕ 434 ವಿಕೆಟ್ ಪಡೆದಿರುವ ಕಪಿಲ್ ದೇವ್ 2ನೇ ಸ್ಥಾನದಲ್ಲಿದ್ದಾರೆ. ಇನ್ನು 417 ವಿಕೆಟ್ ಪಡೆದಿರುವ ಹರ್ಭಜನ್ ಸಿಂಗ್ 3ನೇ ಸ್ಥಾನ, 342 ವಿಕೆಟ್ ಪಡೆದಿರುವ ಅಶ್ವಿನ್ 4ನೇ ಸ್ಥಾನ, 311 ವಿಕೆಟ್ ಗಳೊಂದಿಗೆ ಜಹೀರ್ ಖಾನ್ 5ನೇ ಸ್ಥಾನದಲ್ಲಿದ್ದಾರೆ. 267 ವಿಕೆಟ್ ಗಳೊಂದಿಗೆ ಇಶಾಂತ್ ಶರ್ಮಾ 6ನೇ ಸ್ಥಾನಕ್ಕೇರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕ್ರಿಕೆಟ್indiaಆಸ್ಟ್ರೇಲಿಯಾಟೀಂ ಇಂಡಿಯಾAustraliaIshant Sharmaಇಶಾಂತ್ ಶರ್ಮಾMelbourneBoxing day Testಮೆಲ್ಬೋರ್ನ್Cricket Offbeatಬಾಕ್ಸಿಂಗ್ ಡೇ ಟೆಸ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


