ಬಾಕ್ಸಿಂಗ್ ಡೇ ಟೆಸ್ಟ್; ದಾದಾ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಗೆಲುವಿನೊಂಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾರತ ತಂಡದ ಯಶಸ್ವೀ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

Published On :
ಮೆಲ್ಬೋರ್ನ್: ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಗೆಲುವಿನೊಂಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾರತ ತಂಡದ ಯಶಸ್ವೀ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.
ಹೌದು.. ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಗೆಲುವಿನ ಮೂಲಕ ವಿರಾಟ್ ಕೊಹ್ಲಿ ನಾಯಕನಾಗಿ 11ನೇ ಪಂದ್ಯ ಗೆದ್ದಿದ್ದು, ಅಂತೆಯೇ ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ವಿರಾಟ್ ಕೊಹ್ಲಿ ಒಟ್ಟು 24 ಟೆಸ್ಟ್ ಪಂದ್ಯಗಳಿಗೆ ತಂಡದ ಸಾರಥ್ಯ ವಹಿಸಿದ್ದು, ಈ ಪೈಕಿ 11 ಪಂದ್ಯಗಳಲ್ಲಿ ಜಯಭೇರಿ ಭಾರಿಸಿದ್ದಾರೆ. ಆ ಮೂಲಕ ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆ ಸರಿಗಟ್ಟಿದ್ದಾರೆ. ಗಂಗೂಲಿ 28 ಪಂದ್ಯಗಳಲ್ಲಿ ತಂಡದ ಸಾರಥ್ಯ ವಹಿಸಿದ್ದು, ಈ ಪೈಕಿ 11 ಪಂದ್ಯಗಳಲ್ಲಿ ಭಾರತ ಜಯ ಗಳಿಸಿದೆ. ಇನ್ನು ಎಂಎಸ್ ಧೋನಿ ಗರಿಷ್ಟ ಅಂದರೆ 30 ಪಂದ್ಯಗಳಿಗೆ ಭಾರತ ತಂಡದ ಸಾರಥ್ಯ ವಹಿಸಿದ್ದು, ಈ ಪೈಕಿ 6 ಪಂದ್ಯಗಳಲ್ಲಿ ಭಾರತ ಜಯ ಗಳಿಸಿದೆ. ಅಂತೆಯೇ ರಾಹುಲ್ ದ್ರಾವಿಡ್ 17 ಬಾರಿ ತಂಡದ ಸಾರಥ್ಯ ವಹಿಸಿದ್ದು, 5 ಬಾರಿ ತಂಡ ಜಯ ಗಳಿಸಿದೆ.
ಇನ್ನು ಕೊಹ್ಲಿ ಜಯಗಳಿಸಿರುವ 11 ಪಂದ್ಯಗಳ ಪೈಕಿ 4 ಪಂದ್ಯಗಳು ವಿದೇಶಗಳಲ್ಲಿ ನಡೆದ ಪಂದ್ಯವಾಗಿದ್ದು, ಜೋಹಾನ್ಸ್ ಬರ್ಗ್, ಟ್ರೆಂಟ್ ಬ್ರಿಡ್ಜ್, ಅಡಿಲೇಡ್ ಮತ್ತು ಇಂದು ಮೆಲ್ಬೋರ್ನ್ ನಲ್ಲಿ ಅಂತ್ಯವಾದ ಬಾಕ್ಸಿಂಗ್ ಡೇ ಪಂದ್ಯದಲ್ಲಿ ಭಾರತ ಜಯಗಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕ್ರಿಕೆಟ್indiaಆಸ್ಟ್ರೇಲಿಯಾಟೀಂ ಇಂಡಿಯಾAustraliaVirat Kohliವಿರಾಟ್ ಕೊಹ್ಲಿMelbourneBoxing day Testಮೆಲ್ಬೋರ್ನ್Cricket Offbeatಬಾಕ್ಸಿಂಗ್ ಡೇ ಟೆಸ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


