ಪ್ರೇಯಸಿ ಆಶಿತಾ ಜತೆ ಕರ್ನಾಟಕದ ಆಟಗಾರ ಮಾಯಾಂಕ್ ಅಗರ್ವಾಲ್ ನಿಶ್ಚಿತಾರ್ಥ
ಗೆಳತಿ ಆಶಿತಾ ಸೂದ್ ಅವರೊಂದಿಗೆ ಕರ್ನಾಟಕ ಕ್ರಿಕೆಟ್ ತಂಡದ ಬ್ಯಾಟ್ಸ್ ಮನ್ ಮಾಯಾಂಕ್ ಅಗರ್ವಾಲ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ...

Published On :
ಬೆಂಗಳೂರು: ಗೆಳತಿ ಆಶಿತಾ ಸೂದ್ ಅವರೊಂದಿಗೆ ಕರ್ನಾಟಕ ಕ್ರಿಕೆಟ್ ತಂಡದ ಬ್ಯಾಟ್ಸ್ ಮನ್ ಮಾಯಾಂಕ್ ಅಗರ್ವಾಲ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಕಳೆದ ಬುಧವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಎರಡು ಕುಟುಂಬದ ಆಪ್ತರು ಮತ್ತು ಕೆಲ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ನೇರವೇರಿದೆ. ಆಶಿತಾ ರಾಜ್ಯದ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರವೀಣ್ ಸೂದ್ ಅವರ ಮಗಳು.
ಕಳೆದ 7 ವರ್ಷಗಳಿಂದ ಮಾಯಾಂಕ್ ಮತ್ತು ಆಶಿತಾ ಸ್ನೇಹಿತರಾಗಿದ್ದರು. ಆಶಿತಾ ಇತ್ತೀಚೆಗಷ್ಟೇ ಲಂಡನ್ ನಲ್ಲಿ ಉನ್ನತ ಪದವಿ ಮುಗಿಸಿದ್ದಾರೆ.
ಇದೇ ವರ್ಷಾಂತ್ಯದಲ್ಲಿ ಬೆಂಗಳೂರಿನಲ್ಲಿ ಇವರ ಮದುವೆ ಸಮಾರಂಭ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


