ವಿಶ್ವಕಪ್ ಗೆದ್ದ ಭಾರತ ಕಿರಿಯರಿಗೆ ಬಿಸಿಸಿಐ ಬಹುಮಾನ ಘೋಷಣೆ
ನ್ಯೂಜಿಲೆಂಡ್ ನ ಬೇ ಓವಲ್ ಮೈದಾನದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಟ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 4ನೇ ಬಾರಿಗೆ ಕಿರಿಯರ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಹುಮಾನ ಘೋಷಣೆ ಮಾಡಿದೆ.

Published On :
ನವದೆಹಲಿ: ನ್ಯೂಜಿಲೆಂಡ್ ನ ಬೇ ಓವಲ್ ಮೈದಾನದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಟ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 4ನೇ ಬಾರಿಗೆ ಕಿರಿಯರ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಹುಮಾನ ಘೋಷಣೆ ಮಾಡಿದೆ.
ಈ ಬಗ್ಗೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿರುವ ಬಿಸಿಸಿಐ, ತಂಡದ ಆಟಗಾರರಿಗೆ ಮತ್ತು ಕೋಚ್ ರಾಹುಲ್ ದ್ರಾವಿಡ್, ಸಹಾಯಕ ಕೋಚ್ ಗಳಿಗೆ ಶುಭ ಹಾರೈಸಿದೆ. ಅಲ್ಲದೆ ತಂಡಕ್ಕೆ ಬಹುಮಾನ ಘೋಷಣೆ ಮಾಡಲಾಗಿದ್ದು, ಟೂರ್ನಿಯುದ್ದಕ್ಕೂ ಮತ್ತು ಟೂರ್ನಿ ಆರಂಭಕ್ಕೂ ಮುನ್ನ ವಿಶ್ವಕಪ್ ಗಾಗಿ ತಂಡವನ್ನು ಸಜ್ಜುಗೊಳಿಸಿದ್ದ ಕೋಚ್ ರಾಹುಲ್ ದ್ರಾವಿಡ್ ಅವರಿಗೆ 50 ಲಕ್ಷ ರೂ ಬಹುಮಾನ ಘೋಷಣೆ ಮಾಡಿದ್ದು, ತಂಡದ ಎಲ್ಲ ಆಟಗಾರರಿಗೂ ತಲಾ 30 ಲಕ್ಷ ರೂ ನೀಡುವ ಕುರಿತು ಘೋಷಣೆ ಮಾಡಿದೆ.
ಅಲ್ಲದೆ ತಂಡದ ಸಹಾಯಕ ಕೋಚ್ ಹಾಗೂ ಸಹಾಯಕ ಸಿಬ್ಹಂದಿಗಳಿಗೂ ಬಹುಮಾನ ಘೋಷಣೆ ಮಾಡಲಾಗಿದ್ದು, ಎಲ್ಲ ಸಿಬ್ಬಂದಿಗಳಿಗೂ ತಲಾ 20 ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ನವದೆಹಲಿNew Delhiಟೀಂ ಇಂಡಿಯಾTeam IndiaBCCIchampions2018 under 19 Cricket World Cupಭಾರತ 2018ರ ಅಂಡರ್ 19 ಕ್ರಿಕೆಟ್ ವಿಶ್ವಕಪ್ ಚಾಂಪಿಯನ್ಚಾಂಪಿಯನ್ನರುಬಿಸಿಸ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


