ಭಾರತ ಅಂಡರ್ 19 ವಿಶ್ವಕಪ್ ಚಾಂಪಿಯನ್; ಇತಿಹಾಸ ಸೃಷ್ಟಿಸಿದ ಕೋಚ್ ದ್ರಾವಿಡ್ ಯುವ ಪಡೆ
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ...

Published On :
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ನ್ಯೂಜಿಲೆಂಡ್ ನ ಬೇಓವಲ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಭಾರತ ವೇಗಿಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ತಂಡ 216 ರನ್ ಗಳಿಗೆ ಆಲೌಟ್ ಆಯಿತು. 217 ರನ್ ಗಳ ಗುರಿ ಪಡೆದ ಭಾರತ ತಂಡದ ಆರಂಭಿಕ ಆಟಗಾರರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದಾಗಿ ಭಾರತ 8 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿತು.
ಭಾರತ ಪರ ನಾಯಕ ಪೃಥ್ವಿ ಶಾ 29, ಶುಭ್ಮನ್ ಗಿಲ್ 31 ಮನ್ಜೋತ್ ಕಲ್ರ ಅಜೇಯ 101 ಮತ್ತು ದೇಸಾಯ್ ಅಜೇಯ 47 ರನ್ ಸಿಡಿಸಿದ್ದಾರೆ.
ಆಸ್ಟ್ರೇಲಿಯಾ ಪರ ಎಡ್ವರ್ಡ್ 28, ಜೋನಾಥನ್ ಮೆರ್ಲೋ 76, ಉಪ್ಪಲ್ 34, ಮೆಕ್ಸ್ವೀನಿ 23 ರನ್ ಗಳಿಸಿದ್ದಾರೆ.
ಭಾರತ ಪರ ಬೌಲಿಂಗ್ ನಲ್ಲಿ ಪೊರೆಲ್, ಶಿವಸಿಂಗ್, ನಾಗರ್ಕೋಟಿ ಮತ್ತು ರಾಯ್ ತಲಾ 2 ವಿಕೆಟ್ ಪಡೆದರೆ ಶಿವಂ ಮವಿ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಆಸ್ಟ್ರೇಲಿಯಾಟೀಂ ಇಂಡಿಯಾAustraliaTeam IndiaRahul Dravidರಾಹುಲ್ ದ್ರಾವಿಡ್2018 under 19 Cricket World Cupಭಾರತ 2018ರ ಅಂಡರ್ 19 ಕ್ರಿಕೆಟ್ ವಿಶ್ವಕಪ್ ಚಾಂಪಿಯನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


