3ನೇ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಸರಣಿ ಮೇಲೆ ಬಿಗಿ ಹಿಡಿತ
ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡ ಅತಿಥೇಯ ದಕ್ಷಿಣ ಆಫ್ರಿಕಾ ತಂಡವನ್ನು ಮತ್ತೆ ಮಣಿಸುವ ಮೂಲಕ ಸರಣಿ ಮೇಲೆ ಬಿಗಿ ಹಿಡಿತ ಸಾಧಿಸಿದೆ.

Published On :
ಕೇಪ್ ಟೌನ್: ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡ ಅತಿಥೇಯ ದಕ್ಷಿಣ ಆಫ್ರಿಕಾ ತಂಡವನ್ನು ಮತ್ತೆ ಮಣಿಸುವ ಮೂಲಕ ಸರಣಿ ಮೇಲೆ ಬಿಗಿ ಹಿಡಿತ ಸಾಧಿಸಿದೆ.
ಭಾರತ ನೀಡಿದ 304 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಆಫ್ರಿಕಾ ತಂಡ 40 ಓವರ್ ಗಳಲ್ಲಿ ಕೇವಲ 179 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ ಭಾರತದ ವಿರುದ್ಧ 124 ರನ್ ಗಳ ಹೀನಾಯ ಸೋಲು ಕಂಡಿತು. ಆ ಮೂಲಕ 6 ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 3-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಆಫ್ರಿಕಾಗೆ ಸರಣಿ ಜೀವಂತವಾಗಿರಿಸಿಕೊಳ್ಳಲು ಉಳಿದಿರುವ ಮೂರು ಪಂದ್ಯಗಳನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಒಂದು ವೇಳೆ ಸರಣಿ ಸೋತರೆ ಆಫ್ರಿಕಾ ತಂಡಕ್ಕೆ ತೀವ್ರ ಮುಖಭಂಗವಾಗಲಿದ್ದು, ಸುಧೀರ್ಘ ಸಮಯದ ಬಳಿಕ ತವರಿನಲ್ಲಿ ಭಾರತದ ವಿರುದ್ಧ ಸರಣಿ ಸೋತಂತಾಗುತ್ತದೆ.
ಇನ್ನು ಇದಕ್ಕೂ ಮೊದಲು ಟಾಸ್ ಸೋತರೂ ಬ್ಯಾಟಿಂಗ್ ನಡೆಸಿದ ಭಾರತ ತಂಡ ನಾಯಕ ವಿರಾಟ್ ಕೊಹ್ಲಿ ಅಜೇಯ ಶತಕ (160 ರನ್) ಮತ್ತು ಶಿಖರ್ ಧವನ್ (76 ರನ್) ಅವರ ಅಮೋಘ ಆಟದ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 303 ರನ್ ಕಲೆಹಾಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್indiaಭಾರತVirat Kohliವಿರಾಟ್ ಕೊಹ್ಲಿದಕ್ಷಿಣ ಆಫ್ರಿಕಾSouth Africaಕೇಪ್ ಟೌನ್Cape Town3rd ODI3ನೇ ಏಕದಿನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


