ಕ್ರಿಕೆಟ್

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಪ್ರಾಬಲ್ಯ ಮೆರೆಯುತ್ತಿರುವ ಭಾರತ ಪುರುಷ, ಮಹಿಳಾ ತಂಡಕ್ಕೆ ಇಂದು ಮಹತ್ವದ ದಿನ?

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಪುರುಷ ಮತ್ತು ಮಹಿಳಾ ತಂಡ ಆತಿಥೇಯರ ಮೇಲೆ ಸವಾರಿ ಮಾಡುತ್ತಿದ್ದಾರೆ...

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಪ್ರಾಬಲ್ಯ ಮೆರೆಯುತ್ತಿರುವ ಭಾರತ ಪುರುಷ, ಮಹಿಳಾ ತಂಡಕ್ಕೆ ಇಂದು ಮಹತ್ವದ ದಿನ?
ಭಾರತ ಪುರುಷ, ಮಹಿಳಾ ತಂಡ
Published On :
ಕೇಪ್ ಟೌನ್: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಪುರುಷ ಮತ್ತು ಮಹಿಳಾ ತಂಡ ಆತಿಥೇಯರ ಮೇಲೆ ಸವಾರಿ ಮಾಡುತ್ತಿದ್ದಾರೆ. 
ಆಫ್ರಿಕಾ ವಿರುದ್ಧದ ಆರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಪುರುಷರ ತಂಡ ಮೊದಲ ಮೂರು ಪಂದ್ಯಗಳಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿ ಸರಣಿ ಗೆಲ್ಲುವ ತವಕದಲ್ಲಿದೆ. ಇನ್ನು ಗೆಲುವಿನ ಅಲೆಯಲ್ಲಿ ಬೀಗುತ್ತಿರುವ ಭಾರತ ಮಹಿಳಾ ತಂಡ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಫ್ರಿಕಾ ವಿರುದ್ಧ ಎರಡು ಪಂದ್ಯಗಳನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡಿದೆ. ಇನ್ನು ಅಂತಿಮ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಆಫ್ರಿಕಾ ತಂಡವನ್ನು ವೈಟ್ ವಾಷ್ ಮಾಡುವ ತವಕದಲ್ಲಿದೆ. 
ಭಾರತ ಪುರುಷರ ತಂಡ ಇಂದು ನಾಲ್ಕನೇ ಏಕದಿನ ಪಂದ್ಯವನ್ನು ಆಡುತ್ತಿದ್ದರೇ ಅತ್ತ ಮಹಿಳಾ ತಂಡ ಸರಣಿಯ ಅಂತಿಮ ಪಂದ್ಯವನ್ನು ಆಡಲಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಪುರುಷರ ತಂಡ ಆಫ್ರಿಕಾದಲ್ಲಿ ಚೊಚ್ಚಲ ಏಕದಿನ ಸರಣಿ ಗೆದ್ದ ಸಾಧನೆ ಮಾಡಲಿದೆ. ಇನ್ನು ಆಫ್ರಿಕಾ ಮಹಿಳಾ ತಂಡದ ವಿರುದ್ಧ ಮೂರನೇ ಹಾಗೂ ಅಂತಿಮ ಪಂದ್ಯವನ್ನು ಆಡಲಿರುವ ಭಾರತ ಮಹಿಳಾ ತಂಡ ವೈಟ್ ವಾಷ್ ಸಾಧನೆಗೆ ಸಜ್ಜಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.