4ನೇ ಏಕದಿನ ಪಂದ್ಯ: ಭಾರತದ ವಿರುದ್ಧ ದಕ್ಷಿಣ ಆಫ್ರಿಕಾಗೆ 5 ವಿಕೆಟ್ ಗಳ ಜಯ
ನ್ಯೂವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆದ 4ನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತ ವಿರುದ್ಧ 5 ವಿಕೆಟ್ ಗಳ ಅಂತರದ ಜಯ ದಾಖಲಿಸಿದೆ.

Published On :
ಜೋಹನ್ಸ್ ಬರ್ಗ್: ನ್ಯೂವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆದ 4ನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತ ವಿರುದ್ಧ 5 ವಿಕೆಟ್ ಗಳ ಅಂತರದ ಜಯ ದಾಖಲಿಸಿದೆ.
ಮಳೆಯಿಂದಾಗಿ ಕೇವಲ 28 ಓವರ್ ಗಳಿಗೆ ಸೀಮಿತಗೊಂಡಿದ್ದ ಪಂದ್ಯದಲ್ಲಿ ಆಫ್ರಿಕಾಗೆ ಗೆಲ್ಲಲು 28 ಓವರ್ ಗಳಲ್ಲಿ 202 ರನ್ ಗಳ ಗುರಿಯನ್ನು ನೀಡಲಾಗಿತ್ತು, ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಆಫ್ರಿಕಾ 25.3 ಓವರ್ ನಲ್ಲೇ 5 ವಿಕೆಟ್ ಕಳೆದುಕೊಂಡು 207 ರನ್ ಕಲೆಹಾಕಿ ಸರಣಿಯಲ್ಲಿ ಮೊದಲ ಗೆಲುವಿನ ನಗೆ ಬೀರಿತು, ಆಫ್ರಿಕಾ ಪರ ಹೆನ್ರಿಕ್ ಕ್ಲಾಸನ್ ಅಜೇಯ 43 ರನ್ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಇನ್ನು ಭಾರತದ ಪರ ಕುಲದೀಪ್ ಯಾದವ್ 2 ವಿಕೆಟ್, ಚಾಹಲ್, ಪಾಂಡ್ಯಾ ಮತ್ತು ಬುಮ್ರಾ ತಲಾ 1 ವಿಕೆಟ್ ಪಡೆದರು.
6 ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಭಾರತ ತಂಡ 3-1 ಅಂತರದಲ್ಲಿ ಮುನ್ನಡೆ ಸಾಧಿಸಿದ್ದು, ಮುಂದಿನ 2 ಪಂದ್ಯಗಳಲ್ಲಿ ಒಂದು ಪಂದ್ಯ ಗೆದ್ದರೂ ಸರಣಿ ಭಾರತದ ಕೈವಶವಾಗಲಿದೆ. ಹೀಗಾಗಿ ಸರಣಿ ಜೀವಂತವಾಗಿರಿಸಿಕೊಳ್ಳಲು ಉಳಿದ ಎರಡೂ ಪಂದ್ಯಗಳನ್ನೂ ಗೆಲ್ಲಲೇ ಬೇಕಾದ ಅನಿವಾರ್ಯತೆಗೆ ಆಫ್ರಿಕಾ ಸಿಲುಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್indiaಭಾರತVirat Kohliವಿರಾಟ್ ಕೊಹ್ಲಿದಕ್ಷಿಣ ಆಫ್ರಿಕಾSouth AfricaJohannesburg4th ODI4ನೇ ಏಕದಿನಜೋಹನ್ಸ್ ಬರ್ಗ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


