'ಶ್ರೇಷ್ಠ' ಎಂಎಸ್ ಧೋನಿ ಅಡಿಯಲ್ಲಿ ಆಡುತ್ತೇನೆಂಬ ಯೋಚನೆಯೆ ರೋಮಾಂಚಿತ: ಶೇನ್ ವಾಟ್ಸನ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವುದು ನಿಜವಾದ ಗೌರವವಾದರೇ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ...

Published On :
ಚೆನ್ನೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವುದು ನಿಜವಾದ ಗೌರವವಾದರೇ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ನೇತೃತ್ವದಲ್ಲಿ ಆಡುವ ಯೋಚನೆಯೇ ನನಗೆ ರೋಮಾಂಚನವನ್ನು ಉಂಟು ಮಾಡುತ್ತಿದೆ ಎಂದು ಮಾಜಿ ಆಸ್ಟ್ರೇಲಿಯಾ ಆಟಗಾರ ಶೇನ್ ವಾಟ್ಸನ್ ಹೇಳಿದ್ದಾರೆ.
ರಾಜಸ್ತಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದ್ದ ಶೇನ್ ವಾಟ್ಸನ್ ಸದ್ಯ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಲಿದ್ದಾರೆ. ಇನ್ನು ಐಪಿಎಲ್ 11 ಆವೃತ್ತಿಯಲ್ಲಿ ರಾಜಸ್ತಾನಕ್ಕೆ ದೊಡ್ಡ ಪ್ರತಿಸ್ಪರ್ಧಿಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಹ ಒಂದಾಗಿದ್ದು ಇದು ಆರಂಭದಲ್ಲಿ ಸ್ವಲ್ಪ ವಿಚಿತ್ರ ಎಂದು ಹೇಳಿದ್ದಾರೆ.
36 ವರ್ಷದ ಶೇನ್ ವಾಟ್ಸನ್ 2016ರ ಮಾರ್ಚ್ ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದರು. ಕ್ರಿಕೆಟ್ ಅನ್ನು ತುಂಬಾ ಪ್ರೀತಿಸುತ್ತೇನೆ ಮತ್ತು ಪ್ರತಿಯೊಂದು ಪಂದ್ಯದಿಂದಲೂ ಪ್ರೇರಣೆ ಪಡೆಯುತ್ತೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆಸ್ಟ್ರೇಲಿಯಾAustraliaMS DhoniIPLಐಪಿಎಲ್Shane Watsonಎಂಎಸ್ ಧೋನಿChennai Super Kingsಚೆನ್ನೈ ಸೂಪರ್ ಕಿಂಗ್ಸ್ಶೇನ್ ವಾಟ್ಸನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


