ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಯಿಂದ ಮತ್ತೊಂದು ವಿಶಿಷ್ಟ ದಾಖಲೆ!
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ರನ್ ಗಳ ಪ್ರವಾಹವನ್ನೇ ಹರಿಸಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆಫ್ರಿಕಾ ನೆಲದಲ್ಲಿ ಮತ್ತೊಂದು ವಿನೂತನ ದಾಖಲೆ ನಿರ್ಮಾಣ ಮಾಡಿದ್ದಾರೆ.

Published On :
ಸೆಂಚುರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ರನ್ ಗಳ ಪ್ರವಾಹವನ್ನೇ ಹರಿಸಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆಫ್ರಿಕಾ ನೆಲದಲ್ಲಿ ಮತ್ತೊಂದು ವಿನೂತನ ದಾಖಲೆ ನಿರ್ಮಾಣ ಮಾಡಿದ್ದಾರೆ.
ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ದ್ವಿಪಕ್ಷೀಯ ಸರಣಿಯೊಂದರಲ್ಲಿ 500ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟ್ಸ್ಮನ್ ಮತ್ತು ನಾಯಕ ಎಂಬ ಗೌರವಕ್ಕೆ ಕೊಹ್ಲಿ ಪಾತ್ರರಾಗಿದ್ದು, ಇದೊಂದು ಹೊಸ ಮೈಲುಗಲ್ಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ 6 ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸಿದ ಕೊಹ್ಲಿ 3 ಶತಕ ಮತ್ತು 1 ಅರ್ಧ ಶತಕ ಸಹಿತ 558 ರನ್ ಕಲೆ ಹಾಕಿದ್ದು, ಈ ಮೂಲಕ ಏಕದಿನ ಸರಣಿಯೊಂದರಲ್ಲಿ ವಿಶ್ವದ ಯಾವುದೇ ಬ್ಯಾಟ್ಸಮನ್ ಕಲೆಹಾಕದ ಅತ್ಯಧಿಕ ರನ್ ಗಳಿಸಿದ ವಿಶ್ವದಾಖಲೆ ಬರೆದಿದ್ದಾರೆ.
ಇದಕ್ಕೂ ಮೊದಲು ರೋಹಿತ್ ಶರ್ಮ 2013ರಲ್ಲಿ ತವರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ 6 ಇನಿಂಗ್ಸ್ಗಳಲ್ಲಿ 491 ರನ್ ದಾಖಲಿಸಿದ್ದು ಹಿಂದಿನ ದಾಖಲೆಯಾಗಿತ್ತು. ಇದಕ್ಕೂ ಮೊದಲು ದಕ್ಷಿಣ ಆಫ್ರಿಕಾದಲ್ಲಿ 2005ರಲ್ಲಿ ಇಂಗ್ಲೆಂಡ್ ಬ್ಯಾಟ್ಸ್ಮನ್ ಕೆವಿನ್ ಪೀಟರ್ಸೆನ್ 6 ಪಂದ್ಯಗಳಲ್ಲಿ 3 ಶತಕ ಸಹಿತ 454 ರನ್ ಸಿಡಿಸಿ ದಾಖಲೆ ಬರೆದಿದ್ದರು. ಇದೀಗ ಕೊಹ್ಲಿ ಪೀಟರ್ಸೆನ್ ಮತ್ತು ರೋಹಿತ್ ಶರ್ಮಾ ದಾಖಲೆಯನ್ನೂ ಮುರಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Virat Kohliವಿರಾಟ್ ಕೊಹ್ಲಿRecordದಾಖಲೆIndia vs south africaಭಾರತ ವರ್ಸಸ್ ದಕ್ಷಿಣ ಆಫ್ರಿಕಾCricket Offbeatಕ್ರಿಕೆಟ್ ಸ್ವಾರಸ್ಯCenturionಸೆಂಚೂರಿಯನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


