ಕ್ರಿಕೆಟ್

ಟಿ20 ಸರಣಿಯಿಂದಲೂ ಎಬಿ ಡಿಲಿವಿಯರ್ಸ್ ಔಟ್!

ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಎಡಗಾಲಿನ ಮಂಡಿ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ಟೀಂ ಇಂಡಿಯಾ ವಿರುದ್ಧದ...

ಟಿ20 ಸರಣಿಯಿಂದಲೂ ಎಬಿ ಡಿಲಿವಿಯರ್ಸ್ ಔಟ್!
ಎಬಿಡಿ ವಿಲಿಯರ್ಸ್
Published On :
ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಎಡಗಾಲಿನ ಮಂಡಿ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ಟೀಂ ಇಂಡಿಯಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. 
ಏಕದಿನ ಸರಣಿಯ 5ನೇ ಪಂದ್ಯದಲ್ಲಿ ಡಿವಿಲಿಯರ್ಸ್ ಕಾಲಿನ ಮಂಡಿಗೆ ಪೆಟ್ಟು ಮಾಡಿಕೊಂಡಿದ್ದರು. ನೋವು ಹೆಚ್ಚಾಗಿದ್ದರಿಂದ ಡಿವಿಲಿಯರ್ಸ್ ಶನಿವಾರ ಅಭ್ಯಾಸ ನಡೆಸಿರಲಿಲ್ಲ. ಡಿವಿಲಿಯರ್ಸ್ ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಂಡದ ವ್ಯವಸ್ಥಾಪಕ ಮೊಹಮ್ಮದ್ ಮೂಸಜೆ ಹೇಳಿದ್ದಾರೆ.
ಇನ್ನು ಆರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಮೂರು ಪಂದ್ಯಗಳಿಂದ ದೂರ ಉಳಿದಿದ್ದ ಎಬಿಡಿ ವಿಲಿಯರ್ಸ್ ನಾಲ್ಕನೇ ಪಂದ್ಯಕ್ಕೆ ತಂಡಕ್ಕೆ ಆಗಮಿಸಿದ್ದರು. ಆಫ್ರಿಕಾ ತಂಡ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು ಸ್ಟಾರ್ ಆಟಗಾರರು ತಂಡದಿಂದ ದೂರ ಉಳಿದಿದ್ದಾರೆ. 
ಏಕದಿನ ಸರಣಿಯಲ್ಲಿ 5-1 ಅಂತರದಿಂದ ಸರಣಿ ಗೆದ್ದಿರುವ ಟೀಂ ಇಂಡಿಯಾ ಇದೀಗ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.