ದ. ಆಫ್ರಿಕಾ ವಿರುದ್ಧದ ಅಂತಿಮ ಟಿ20, ಟಾಸ್ ಗೆದ್ದ ಅತಿಥೇಯರಿಂದ ಫಿಲ್ಡಿಂಗ್ ಆಯ್ಕೆ
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ.
Published On :
ಕೇಪ್ ಟೌನ್ (ದಕ್ಷಿಣ ಆಫ್ರಿಕಾ): ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ.
ವಿಶೇಷವೆಂದರೆ ಈ ಪಂದ್ಯದಲ್ಲಿ ನಾಯಕ ಕೊಹ್ಲಿ ಆಡುತ್ತಿಲ್ಲ. ಬೆನ್ನುನೋವಿನಿಂದ ಬಳಲುತ್ತಿರುವ ಕೊಹ್ಲಿ ಬದಲಿಗೆ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.ಇದರೊಡನೆ ಕೊಹ್ಲಿ ಬದಲಾಗಿ ದಿನೇಶ್ ಕಾರ್ತಿಕ್ ತಂಡಕ್ಕೆ ಮರಳಿದ್ದಾರೆ.
ಇನ್ನು ಭಾರತದ ಭರವಸೆ ಆಟಗಾರ ಜಸ್ಪ್ರೀತ್ ಬುಮ್ರಾ ಮತ್ತು ಅಕ್ಸರ್ ಪಟೇಲ್ ತಂಡಕ್ಕೆ ಸೇರ್ಪಡೆಯಾಗಿದ್ದು ಚಹಲ್ ಹಾಗೂ ಜೈದೇವ್ ಉನದ್ಕಟ್ ಅವರುಗಳನ್ನು ಕೈಬಿಡಲಾಗಿದೆ.
ಇದಾಗಲೇ ಏಕದಿನ ಸರಣಿಯನ್ನು ಗೆದ್ದಿರುವ ಭಾರತ ಟಿ20 ಯಲ್ಲಿಯೂ ಪಾರಮ್ಯ ಮೆರೆಯಲು ಹವಣಿಸುತ್ತಿದೆ. ಆದರೆ ವಿರಾಟ್ ಕೊಹ್ಲಿ ಇಲ್ಲದಿರುವುದು ಕ್ರಿಕೆಟ್ ಪ್ರೇಮಿಗಳಿಗೆ ಬಹುದೊಡ್ಡ ನಿರಾಶೆಯಾಗಿದೆ.
ಮೂರು ಟಿ20 ಪಂದ್ಯಗಳಲ್ಲಿ ಎರಡೂ ತಂಡಗಳು ಒಂದೊಂದು ಪಂದ್ಯಗಳನ್ನು ಗೆದ್ದಿದ್ದು ಇತ್ತಂಡಗಳಿಗೆ ಈ ಪಂದ್ಯ ಅತ್ಯಂತ ಮಹತ್ವದ್ದೆನಿಸಿದೆ.
ಇದೇ ವೇಳೆ ದಕ್ಷಿಣ ಆಫ್ರಿಕಾ ತಂಡದಲ್ಲಿ ಸಹ ಎರಡು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದ್ದು ಜೆ.ಜೆ. ಸ್ಮಟ್ಸ್ ಮತ್ತು ಡೇನ್ ಪ್ಯಾಟರ್ಸನ್ ಅವರುಗಳ ಬದಲಿಗೆ ಕ್ರಿಸ್ಟಿಯಾನ್ ಜೊಂಕರ್ ಆರೋನ್ ಫಾಂಗಿಸೊ ಅವರುಗಳನ್ನು ತಂಡಕ್ಕೆ ಸೇರ್ಪಡೆಗೊಳಿಸಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

