ಸತತ 2ನೇ ಬಾರಿಗೆ ಟೀಂ ಇಂಡಿಯಾ ಟೆಸ್ಟ್ ಚಾಂಪಿಯನ್
ಟೆಸ್ಟ್ ಕ್ರಿಕೆಟ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟೆಸ್ಟ್ ಚಾಂಪಿಯನ್ ಷಿಪ್ ಅನ್ನು ಮುಡಿಗೇರಿಸಿಕೊಂಡಿದೆ...

Published On :
ಕೇಪ್ ಟೌನ್: ಟೆಸ್ಟ್ ಕ್ರಿಕೆಟ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟೆಸ್ಟ್ ಚಾಂಪಿಯನ್ ಷಿಪ್ ಅನ್ನು ಮುಡಿಗೇರಿಸಿಕೊಂಡಿದೆ.
ಕಳೆದ ಎರಡು ವರ್ಷಗಳಿಂದ ಉತ್ತಮ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಟೆಸ್ಟ್ ಚಾಂಪಿಯನ್ ಷಿಪ್ ಅನ್ನು ನಾಲ್ಕನೇ ಬಾರಿಗೆ ತನ್ನದಾಗಿಸಿಕೊಂಡಿದೆ. ನಿನ್ನೆ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಂಡ ಟೀಂ ಇಂಡಿಯಾಗೆ ಐಸಿಸಿ ಹಾಲ್ ಆಫ್ ಫೇಮರ್ಸ್ ಆದ ಸುನೀಲ್ ಗವಾಸ್ಕರ್ ಹಾಗೂ ಗ್ರೇಮ್ ಪೊಲಕ್ ವಿರಾಟ್ ಕೊಹ್ಲಿಗೆ ಟೆಸ್ಟ್ ಚಾಂಪಿಯನ್ ಪ್ರಶಸ್ತಿ ನೀಡಿದರು. ಟ್ರೋಫಿಯ ಜೊತೆಗೆ ಟೀಂ ಇಂಡಿಯಾ ತಂಡಕ್ಕೆ 1 ಮಿಲಿಯನ್ ಅಮೆರಿಕನ್ ಡಾಲರ್(6.47 ಕೋಟಿ ರುಪಾಯಿ) ಲಭಿಸಿದೆ.
2002ರಿಂದ 2009ರವರೆಗೆ ಟೆಸ್ಟ್ ಕ್ರಿಕೆಟ್ ನಲ್ಲಿ ಪ್ರಾಬಲ್ಯ ಮೆರೆದಿದ್ದ ಆಸ್ಟ್ರೇಲಿಯಾ 9 ಬಾರಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಭಾರತ ನಾಲ್ಕು ಬಾರಿ, ದಕ್ಷಿಣ ಆಫ್ರಿಕಾ ಮೂರು ಮತ್ತು ಇಂಗ್ಲೆಂಡ್ ಒಂದು ಬಾರಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿಐಸಿಸಿICCTest Championshipಟೆಸ್ಟ್ ಚಾಂಪಿಯನ್ ಷಿಪ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


