ಕ್ರಿಕೆಟ್

ಲಿಸ್ಟ್ ‘ಎ’ ಟೂರ್ನಿಯಲ್ಲಿ ಗರಿಷ್ಠ ರನ್; ಸಚಿನ್ ದಾಖಲೆ ಮುರಿದ ಮಯಾಂಕ್ ಅಗರ್ವಾಲ್

ಕರ್ನಾಟಕದ ಉದಯೋನ್ಮುಖ ಕ್ರಿಕೆಟಿಗೆ ಮಯಾಂಕ್ ಅಗರ್ವಾಲ್ ದೇಶೀ ಟೂರ್ನಿ ವಿಜಯ್ ಹಜಾರೆ ಟೂರ್ನಿಯಲ್ಲಿ ಗರಿಷ್ಠ ರನ್ ಗಳಿಸುವ ಮೂಲಕ ಮಾಸ್ಚರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ.

ಲಿಸ್ಟ್ ‘ಎ’ ಟೂರ್ನಿಯಲ್ಲಿ ಗರಿಷ್ಠ ರನ್; ಸಚಿನ್ ದಾಖಲೆ ಮುರಿದ ಮಯಾಂಕ್ ಅಗರ್ವಾಲ್
ಸಂಗ್ರಹ ಚಿತ್ರ
Published On :
ನವದೆಹಲಿ: ಕರ್ನಾಟಕದ ಉದಯೋನ್ಮುಖ ಕ್ರಿಕೆಟಿಗೆ ಮಯಾಂಕ್ ಅಗರ್ವಾಲ್ ದೇಶೀ ಟೂರ್ನಿ ವಿಜಯ್ ಹಜಾರೆ ಟೂರ್ನಿಯಲ್ಲಿ ಗರಿಷ್ಠ ರನ್ ಗಳಿಸುವ ಮೂಲಕ ಮಾಸ್ಚರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ.
ಮಯಾಂಕ್ 2017-18ರ ಕ್ರಿಕೆಟ್ ಋತುವಿನ ಲಿಸ್ಟ್ ‘ಎ’ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಒಟ್ಟು 8 ಪಂದ್ಯಗಳಲ್ಲಿ 723 ರನ್ ಗಳಿಸಿದ್ದು, ಇದು ಟೂರ್ನಿಯ ಗರಿಷ್ಠ ವೈಯುಕ್ತಿಕ ಗರಿಷ್ಠ ರನ್ ಗಳಿಕೆಯಾಗಿದೆ. ಆ ಮೂಲಕ ಮಯಾಂಕ್ ಅಗರ್ವಾಲ್ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರ 15 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.
ಇನ್ನು ಮಯಾಂಕ್ ಅವರ ಈ ರನ್ ಗಳಿಕೆಯಲ್ಲಿ ಮೂರು ಶತಕ ಹಾಗೂ 4 ಅರ್ಧಶತಕಗಳು ಸೇರಿದ್ದು, ಮಯಾಂಕ್ ಲೀಸ್ಟ್ ‘ಎ’ ಸರಣಿ ಅಥವಾ ಟೂರ್ನಿಯಲ್ಲಿ 700ಕ್ಕೂ ಅಧಿಕ ರನ್ ಗಳಿಸಿದ ಭಾರತದ ಮೊದಲ ದಾಂಡಿಗ ಎನಿಸಿಕೊಂಡಿದ್ದಾರೆ. ಈ ಋತುವಿನ ಎಲ್ಲ ಮಾದರಿ ಕ್ರಿಕೆಟ್‌ನಲ್ಲಿ 2,141 ರನ್ ಗಳಿಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಎಂಬ ಸಾಧನೆ ಮಾಡಿರುವ ಮಯಾಂಕ್ ಲಿಸ್ಟ್ ‘ಎ’ ಟೂರ್ನಿ ಹಾಗೂ ವಿಜಯ್ ಹಜಾರೆ ಟ್ರೋಫಿಯಲ್ಲಿ ಗರಿಷ್ಠ ರನ್ ಗಳಿಸಿದ್ದಲ್ಲದೆ ಗರಿಷ್ಠ ಸಿಕ್ಸರ್ (18)ಗಳನ್ನು ಸಿಡಿಸಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ಮಯಾಂಕ್ 109, 84, 28, 102, 89, 140, 81 ಹಾಗೂ 90 ರನ್ ಗಳಿಸಿದ್ದಾರೆ.
ಇನ್ನು ಭಾರತದ ಬ್ಯಾಟಿಂಗ್ ದಂತಕತೆ ಸಚಿನ್ ತೆಂಡೂಲ್ಕರ್ 2003ರಲ್ಲಿ ದಕ್ಷಿಣ ಆಫ್ರಿಕದಲ್ಲಿ ನಡೆದ ಐಸಿಸಿ ವಿಶ್ವಕಪ್‌ನಲ್ಲಿ 11 ಪಂದ್ಯಗಳಲ್ಲಿ 673 ರನ್ ಗಳಿಸಿದ್ದರು. ಇದರಲ್ಲಿ 1 ಶತಕ ಹಾಗೂ 6 ಅರ್ಧಶತಕಗಳು ದಾಖಲಾಗಿದ್ದವು. ಇದು ಲಿಸ್ಟ್ ‘ಎ’ ಟೂರ್ನಿಯಲ್ಲಿ ದಾಖಲಾಗಿರುವ ಗರಿಷ್ಠ ವೈಯಕ್ತಿಕ ರನ್ ಆಗಿತ್ತು. ತೆಂಡೂಲ್ಕರ್ ಬಳಿಕ ಭಾರತ ನಾಯಕ ವಿರಾಟ್ ಕೊಹ್ಲಿ ಸರಣಿಯಲ್ಲಿ ಗರಿಷ್ಠ ಸ್ಕೋರ್ ದಾಖಲಿಸಿದ್ದರು. ಕೊಹ್ಲಿ ಇತ್ತೀಚೆಗೆ ಕೊನೆಗೊಂಡ ದಕ್ಷಿಣ ಆಫ್ರಿಕ ವಿರುದ್ಧ ಸರಣಿಯಲ್ಲಿ 558 ರನ್ ಗಳಿಸಿದ್ದರು. ಸರಣಿಯಲ್ಲಿ 3 ಶತಕ ಹಾಗೂ 1 ಅರ್ಧಶತಕ ಗಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.