ಆರ್ಸಿಬಿ ಕೋಚಿಂಗ್ ತಂಡಕ್ಕೆ ಇಬ್ಬರ ಸೇರ್ಪಡೆ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫ್ರಾಂಚೈಸಿ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡಕ್ಕೆ ಮತ್ತಷ್ಟು ಬಲ ಬಂದಂತಾಗಿದ್ದು ದಕ್ಷಿಣ..

Published On :
ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡಕ್ಕೆ ಮತ್ತಷ್ಟು ಬಲ ಬಂದಂತಾಗಿದ್ದು ದಕ್ಷಿಣ ಆಫ್ರಿಕಾ ಮಾಜಿ ಆಟಗಾರ ಗ್ಯಾರಿ ಕರ್ಸ್ಟನ್ ಬ್ಯಾಟಿಂಗ್ ಮತ್ತು ಆಶಿಶ್ ನೆಹ್ರಾ ಬೌಲಿಂಗ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ.
2018ನೇ ಸಾಲಿನ ಐಪಿಎಲ್ 11ನೇ ಆವೃತ್ತಿಗೆ 2011ರಲ್ಲಿ ಟೀಂ ಇಂಡಿಯಾ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದ ಗ್ಯಾರಿ ಕರ್ಸ್ಟನ್ ಬ್ಯಾಟಿಂಗ್ ಕೋಚ್ ಆಗಲಿದ್ದಾರೆ.
ನ್ಯೂಜಿಲೆಂಡ್ ತಂಡದ ಡ್ಯಾನಿಯಲ್ ವೆಟರಿ ಆರ್ಸಿಬಿ ತಂಡದ ಮುಖ್ಯ ತರಬೇತುದಾರರಾಗಿದ್ದು ಗ್ಯಾರಿ ಹಾಗೂ ನೆಹ್ರಾ ಅನುಕ್ರಮವಾಗಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಕೋಚ್ ಆಗಿ ಸೇರ್ಪಡೆಗೊಂಡಿದ್ದಾರೆ.
ಜನವರಿ 27 ಹಾಗೂ 28ರಂದು ಬೆಂಗಳೂರಿನಲ್ಲಿ ಐಪಿಎಲ್ ಹರಾಜು ನಡೆಯಲಿದ್ದು ಅದಕ್ಕೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರು ತಂಡಕ್ಕೆ ಸೇರ್ಪಡೆಗೊಂಡಿರುವುದು ತಂಡಕ್ಕೆ ಆನೆ ಬಲ ಬಂದಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Virat Kohliವಿರಾಟ್ ಕೊಹ್ಲಿRCBಆರ್ಸಿಬಿGary KirstenAshish Nehraಆಶಿಶ್ ನೆಹ್ರಾಗ್ಯಾರಿ ಕರ್ಸ್ಟನ್Coaching Staffಕೋಚಿಂಗ್ ತಂಡ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


