ಮೊದಲ ಟೆಸ್ಟ್: ಭುವನೇಶ್ವರ್ ಮಾರಕ ದಾಳಿ, ಆಫ್ರಿಕಾ 13 ರನ್‌ಗೆ 3 ವಿಕೆಟ್
ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಪ್ರಾರಂಭವಾಗಿದ್ದು ಟಾಸ್ ಗೆದ್ದ ಆಫ್ರಿಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ...

Published On :
ಕೇಪ್ ಟೌನ್: ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಪ್ರಾರಂಭವಾಗಿದ್ದು ಟಾಸ್ ಗೆದ್ದ ಆಫ್ರಿಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಕೇಪ್ ಟೌನ್ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಇನ್ನಿಂಗ್ಸ್ ಆರಂಭಿಸಿದ ಆಫ್ರಿಕಾ ತಂಡಕ್ಕೆ ವೇಗಿ ಭುವನೇಶ್ವರ್ ಕುಮಾರ್ ಆಘಾತ ನೀಡಿದರು. ಆರಂಭಿಕ ಮೂರು ವಿಕೆಟ್ ಗಳನ್ನು ಕಿತ್ತು ಆಫ್ರಿಕಾ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದರು.
ಆಫ್ರಿಕಾ ಪರ ಆರಂಭಿಕರಾಗಿ ಕಣಕ್ಕಿಳಿದ ಎಲ್ಗರ್ 0, ಮಾರ್ಕ್ ರಾಮ್ 5, ಆಶಿಮ್ ಆಮ್ಲಾ 3 ರನ್ ಗಳಿಸಿ ಔಟಾದರು. ಸದ್ಯ ಎಬಿಡಿ ವಿಲಿಯರ್ಸ್ 6 ಮತ್ತು ಡುಪ್ಲೇಸಿಸ್ 1 ರನ್ ಗಳಿಸಿ ಆಡುತ್ತಿದ್ದಾರೆ.
ಟೀಂ ಇಂಡಿಯಾ ಪರ ಭುವನೇಶ್ವರ್ ಕುಮಾರ್ 3 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam Indiaದಕ್ಷಿಣ ಆಫ್ರಿಕಾSouth Africaಕೇಪ್ ಟೌನ್Cape Town1st Testಮೊದಲನೇ ಟೆಸ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


