ಐಪಿಎಲ್ 2018: ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ರಿಕಿ ಪಾಂಟಿಂಗ್ ಕೋಚ್
2018ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಫ್ರಾಂಚೈಸಿ ಡೆಲ್ಲಿ ಡೇರ್ ಡೆವಿಲ್ಸ್ ತನ್ನ ತಂಡದ ಕೋಚ್ ಆಗಿ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್...

Published On :
ಮುಂಬೈ: 2018ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಫ್ರಾಂಚೈಸಿ ಡೆಲ್ಲಿ ಡೇರ್ ಡೆವಿಲ್ಸ್ ತನ್ನ ತಂಡದ ಕೋಚ್ ಆಗಿ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರನ್ನು ಆಯ್ಕೆ ಮಾಡಿದೆ.
ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಸಿಇಒ ಹೇಮಂತ್ ದುವಾ ಅವರು ತಂಡದ ಕೋಚ್ ಆಗಿ ಮೂರು ಬಾರಿ ವಿಶ್ವಕಪ್ ವಿಜೇತ ತಂಡದ ಆಟಗಾರ ರಿಕಿ ಪಾಂಟಿಂಗ್ ರನ್ನು ಆಯ್ಕೆ ಮಾಡಲಾಗಿದೆ ಎಂದರು.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಸಂಘರ್ಷದ ನಿಬಂಧನೆಗಳ ಕಾರಣದಿಂದಾಗಿ ಹಿಂದಿನ ಋತುವಿನ ನಂತರ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಕೋಚ್ ಹುದ್ದೆಯಿಂದ ಕೆಳಗಿಳಿದಿದ್ದರು.
ರಾಹುಲ್ ದ್ರಾವಿಡ್ ಸ್ವಹಿತಾಸಕ್ತಿ ಆರೋಪ ಹಿನ್ನೆಲೆಯಲ್ಲಿ ಡೆಲ್ಲಿ ತಂಡದ ಕೋಚ್ ಹುದ್ದೆ ತೊರೆದು ಭಾರತ 'ಎ' ಮತ್ತು ಅಂಡರ್-19 ತಂಡದ ಕೋಚ್ ಹುದ್ದೆಯನ್ನು ಆಯ್ಕೆ ಮಾಡಿಕೊಂಡರು.
ರಿಕಿ ಪಾಂಟಿಂಗ್ 2015, 2016ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. 2015ರಲ್ಲಿ ಮುಂಬೈ ಚಾಂಪಿಯನ್ ಆಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಕೋಚ್ಡೆಲ್ಲಿ ಡೇರ್ ಡೆವಿಲ್ಸ್coachDelhi DaredevilsRicky Pontingರಿಕಿ ಪಾಂಟಿಂಗ್IPL 2018ಐಪಿಎಲ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


