ಕ್ರಿಕೆಟ್

ಆರಂಭಿಕ ಆಟಗಾರರ ವೈಫಲ್ಯ ನಡುವೆ ಭರ್ಜರಿ ಅರ್ಧ ಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರರು ವೈಫಲ್ಯದ ನಡುವೆ ಆಲ್ರೌಂಡರ್ ಹಾರ್ದಿಕ್...

ಆರಂಭಿಕ ಆಟಗಾರರ ವೈಫಲ್ಯ ನಡುವೆ ಭರ್ಜರಿ ಅರ್ಧ ಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ
ಹಾರ್ದಿಕ್ ಪಾಂಡ್ಯ
Published On :
ಕೇಪ್ ಟೌನ್: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರರು ವೈಫಲ್ಯದ ನಡುವೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಭರ್ಜರಿ ಅರ್ಧ ಶತಕ ಸಿಡಿಸುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದ್ದಾರೆ.
ಕೇಪ್ ಟೌನ್ ನ ನ್ಯೂ ಲ್ಯಾಂಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 286 ರನ್ ಗಳಿಗೆ ಆಲೌಟ್ ಆಯಿತು. ನಂತರ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಆಟಗಾರರು ಆಫ್ರಿಕಾ ತಂಡದ ವೇಗಿಗಳ ಮಾರಕ ದಾಳಿಗೆ ಪೆವಿಲಿಯನ್ ಪರೇಡ್ ನಡೆಸಿದರು. ಈ ಮಧ್ಯೆ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ 46 ಎಸೆತಗಳಲ್ಲಿ 51 ರನ್ ಪೇರಿಸಿ ಅರ್ಧ ಶತಕ ಸಿಡಿಸಿದರು. 
ಟೀಂ ಇಂಡಿಯಾ ಪರ ಮುರಳಿ ವಿಜಯ್ 1, ಶಿಖರ್ ಧವನ್ 16, ಚೇತೇಶ್ವರ ಪೂಜಾರ 26, ವಿರಾಟ್ ಕೊಹ್ಲಿ 5, ರೋಹಿತ್ ಶರ್ಮಾ 11, ಆರ್ ಅಶ್ವಿನ್ 12, ವೃದ್ಧಿಮಾನ್ ಸಾಹಾ ಶೂನ್ಯಕ್ಕೆ ಔಟಾಗಿದ್ದಾರೆ. ಸದ್ಯ ಹಾರ್ದಿಕ್ ಪಾಂಡ್ಯ ಅಜೇಯ 78 ಮತ್ತು ಭುವನೇಶ್ವರ್ ಕುಮಾರ್ 22 ರನ್ ಗಳಿಸಿ ಆಡುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.