ಕ್ರಿಕೆಟ್

ಜಮ್ಮು ಮತ್ತು ಕಾಶ್ಮೀರ: ಪಾಕ್ ರಾಷ್ಟ್ರಗೀತೆಗೆ ಗೌರವ, ನಾಲ್ವರು ಕ್ರಿಕೆಟಿಗರ ಬಂಧನ

ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ನಡೆದ ಕ್ರಿಕೆಟ್ ಪಂದ್ಯವೊಂದಕ್ಕೂ ಮುನ್ನ ಪಾಕಿಸ್ತಾನ ರಾಷ್ಟ್ರಗೀತೆಯನ್ನು ಹಾಡಿ, ಅದಕ್ಕೆ ಗೌರವ ಸೂಚಿಸಿದ ನಾಲ್ವರು ಕ್ರಿಕೆಟ್ ಆಟಗಾರರನ್ನು ಪೊಲೀಸರು ಬಂಧಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಪಾಕ್ ರಾಷ್ಟ್ರಗೀತೆಗೆ ಗೌರವ, ನಾಲ್ವರು ಕ್ರಿಕೆಟಿಗರ ಬಂಧನ
ಜಮ್ಮು ಮತ್ತು ಕಾಶ್ಮೀರ: ಪಾಕ್ ರಾಷ್ಟ್ರಗೀತೆಗೆ ಗೌರವ, ನಾಲ್ವರು ಕ್ರಿಕೆಟಿಗರ ಬಂಧನ
Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ನಡೆದ ಕ್ರಿಕೆಟ್ ಪಂದ್ಯವೊಂದಕ್ಕೂ ಮುನ್ನ ಪಾಕಿಸ್ತಾನ ರಾಷ್ಟ್ರಗೀತೆಯನ್ನು ಹಾಡಿ, ಅದಕ್ಕೆ ಗೌರವ ಸೂಚಿಸಿದ ನಾಲ್ವರು ಕ್ರಿಕೆಟ್ ಆಟಗಾರರನ್ನು ಪೊಲೀಸರು ಬಂಧಿಸಿದ್ದಾರೆ. 
ಕಾಶ್ಮೀರದ ಬಂಡಿಪೋರಾದಲ್ಲಿ ಎಂಸಿಸಿ ಗೊಂಡಿಪೊರಾ ಮತ್ತು ಡಾಸ್ಪೋರಾ ಕ್ರಿಕೆಟ್ ಕ್ಲಬ್ ಗಳ ನಡುವೆ ಜನವರಿ 3ರಂದು ಸ್ಥಳೀಯ ಪಂದ್ಯಾವಳಿ ನಡೆದಿತ್ತು. ಈ ಸಂದರ್ಭದಲ್ಲಿ ಈ ಘಟನೆ ನಡೆಸಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ. 
ಪಂದ್ಯಕ್ಕೂ ಮುನ್ನ ಧ್ವನಿವರ್ಧಕದಲ್ಲಿ ಪಾಕಿಸ್ತಾನದ ರಾಷ್ಟ್ರಗೀತೆ ಮೊಳಗುವಾಗ ಉಭಯ ತಂಡಗಳ ಆಟಗಾರರು ನಿಂತು ಗೌರವ ಸೂಚಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. 
ಈ ಸಂಬಂಧ ನಾಲ್ವರು ಕ್ರಿಕೆಟಿಗರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಬಂಡಿಪೋರಾದ ಹಿರಿಯ ಪೊಲೀಸ್ ಅಧೀಕ್ಷಕ ಶೇಖ್ ಜುಲ್ಫಿಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.