ದಾಖಲೆ ಬರೆದ ಹಾರ್ದಿಕ್ ಪಾಂಡ್ಯಾ ಸಾಹಸ-ಭುವನೇಶ್ವರ್ ಕುಮಾರ್ ತಾಳ್ಮೆಯ ಆಟ
ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡ ಹಿನ್ನಡೆ ಅನುಭವಿಸಿದ್ದರೂ, ಹಾರ್ದಿಕ್ ಪಾಂಡ್ಯಾ ಮತ್ತು ಭುವನೇಶ್ವರ್ ಕುಮಾರ್ ಅವರ ಅಮೋಘ ಜೊತೆಯಾಟ ದಾಖಲೆಯೊಂದನ್ನು ಬರೆದಿದೆ.

Published On :
ಕೇಪ್ ಟೌನ್: ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡ ಹಿನ್ನಡೆ ಅನುಭವಿಸಿದ್ದರೂ, ಹಾರ್ದಿಕ್ ಪಾಂಡ್ಯಾ ಮತ್ತು ಭುವನೇಶ್ವರ್ ಕುಮಾರ್ ಅವರ ಅಮೋಘ ಜೊತೆಯಾಟ ದಾಖಲೆಯೊಂದನ್ನು ಬರೆದಿದೆ.
ನಿನ್ನೆ ನಡೆದ ಭಾರತದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತೀಯ ಆಟಗಾರರು ಆಫ್ರಿಕಾದ ಪ್ರಬಲ ಬೌಲಿಂಗ್ ದಾಳಿ ಎದುರಿಸಲಾಗದೇ ತರಗೆಲೆಗಳಂತೆ ವಿಕೆಟ್ ಒಪ್ಪಿಸಿದರು. ಆದರೆ 8ನೇ ವಿಕೆಟ್ ನಲ್ಲಿ ಜೊತೆಯಾದ ಹಾರ್ದಿಕ್ ಪಾಂಡ್ಯಾ ಮತ್ತು ಭುವನೇಶ್ವರ್ ಕುಮಾರ್ ಜೋಡಿ ಅಮೋಘ ಆಟದ ಪ್ರದರ್ಶನ ನೀಡುವ ಮೂಲಕ ದಾಖಲೆಯೊಂದನ್ನು ಬರೆದಿದೆ. 8ನೇ ವಿಕೆಟ್ ಗೆ ಈ ಜೋಡಿ ಬರೊಬ್ಬರಿ 99 ರನ್ ಗಳಿಸಿದರು. ಒಂದು ಬದಿಯಲ್ಲಿ ಹಾರ್ದಿಕ್ ಪಾಂಡ್ಯಾ ಬೌಂಡರಿ ಮತ್ತು ಸಿಕ್ಸರ್ ಗಳ ಮೂಲಕ ಸ್ಫೋಟಕ ಆಟ ಪ್ರದರ್ಶಿಸುತ್ತಿದ್ದರೆ ಮತ್ತೊಂದು ಬದಿಯಲ್ಲಿ ಅವರಿಗೆ ಉತ್ತಮ ಸಾಥ್ ನೀಡಿದ ಭುವಿ ತಾಳ್ಮೆ ರಕ್ಷಣಾತ್ಮಕ ಆಟದ ಮೊರೆ ಹೋಗಿದ್ದರು.
ಭಾರತದ ಇನ್ನಿಂಗ್ಸ್ ನ ಆಂತಿಮ ಘಟ್ಟದಲ್ಲಿ ಭುವನೇಶ್ವರ್ ಕುಮಾರ್ ಜೊತೆಗೂಡಿ 99 ರನ್ ಗಳ ಅಮೂಲ್ಯ ಜೊತೆಯಾಟ ನೀಡಿದರು. ಆ ಮೂಲಕ ಈ ಮತ್ತೊಂದು ದಾಖಲೆ ಬರೆದ ಪಾಂಡ್ಯಾ-ಭುವಿ ಜೋಡಿ, ಆಫ್ರಿಕನ್ನರ ವಿರುದ್ಧ 8ನೇ ವಿಕೆಟ್ ನಲ್ಲಿ ಅತೀ 2ನೇ ಅತೀ ಹೆಚ್ಚು ರನ್ ಗಳ ಜೊತೆಯಾಟವಾಡಿದ ಆಟಗಾರರೆನಿಸಿಕೊಂಡರು. ಈ ಹಿಂದೆ ಡರ್ಬನ್ ನಲ್ಲಿ ಪ್ರವೀಣ್ ಅಮ್ರೆ ಮತ್ತು ಕಿರಣ್ ಮೋರೆ ಜೋಡಿ ಆಫ್ರಿಕಾ ವಿರುದ್ಧ 8ನೇ ವಿಕೆಟ್ ಜೊತೆಯಾಟದಲ್ಲಿ 101 ರನ್ ಕಲೆಹಾಕಿದ್ದರು. ಇದು ಈ ವರೆಗಿನ ಅತೀ ಹೆಚ್ಚು ರನ್ ಗಳ ಜೊತೆಯಾಟವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕೇಪ್ ಟೌನ್Bhuvneshwar KumarCape TownHardik PandyaIndia vs south africaಭಾರತ ವರ್ಸಸ್ ದಕ್ಷಿಣ ಆಫ್ರಿಕಾಹಾರ್ದಿಕ್ ಪಾಂಡ್ಯಾCricket Offbeatಕ್ರಿಕೆಟ್ ಸ್ವಾರಸ್ಯ1st Test Matchಭು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


