ಭಾರತ-ಆಫ್ರಿಕಾ ನಡುವನ ಮೊದಲ ಟೆಸ್ಟ್ ಪಂದ್ಯ: 3ನೇ ದಿನದಾಟ ಮಳೆಗೆ ಆಹುತಿ!
ಪ್ರವಾಸಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಮಳೆಗೆ ಆಹುತಿಯಾಗಿದೆ...

Published On :
ಕೇಪ್ ಟೌನ್: ಪ್ರವಾಸಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಮಳೆಗೆ ಆಹುತಿಯಾಗಿದೆ.
ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ಇನ್ನು ಬೆಳಗ್ಗಿನಿಂದಲೇ ಮಳೆ ಬರುತ್ತಿದ್ದರಿಂದ ಮೂರನೇ ದಿನದಾಟದಲ್ಲಿ ಒಂದೇ ಒಂದು ಎಸೆತವನ್ನು ಕೂಡ ಮಾಡಲು ಸಾಧ್ಯವಾಗಲಿಲ್ಲ. ಮಳೆ ಎಡಬಿಡದೆ ಸುರಿಯುತ್ತಿದ್ದರಿಂದ ಅಂತಿಮವಾಗಿ ದಿನದಾಟವನ್ನು ಕೈಬಿಡಲಾಯಿತು.
ಎರಡನೇ ದಿನದಾಟದಂತ್ಯಕ್ಕೆ ದಕ್ಷಿಣ ಆಫ್ರಿಕಾ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 65 ರನ್ ಗಳಿಸಿತ್ತು. ಹಾಶೀಮ್ ಆಮ್ಲಾ ಅಜೇಯ 4 ಹಾಗೂ ಕಾಗಿಸೋ ರಬಾಡ ಅಜೇಯ 2 ರನ್ ಗಳಿಸಿ ಆಟವಾಡುತ್ತಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ದಕ್ಷಿಣ ಆಫ್ರಿಕಾ ತಂಡ 286 ರನ್ ಗಳಿಗೆ ಆಲೌಟ್ ಆಯಿತು. ನಂತರ ಇನ್ನಿಂಗ್ಸ್ ಪ್ರಾರಂಭಿಸಿದ್ದ ಟೀಂ ಇಂಡಿಯಾ 209 ರನ್ ಗಳಿಗೆ ಸರ್ವಪತನ ಕಂಡಿತ್ತು. ಸದ್ಯ ದಕ್ಷಿಣ ಆಫ್ರಿಕಾ 142 ರನ್ ಗಳ ಮುನ್ನಡೆ ಸಾಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


