ಮೊದಲ ಟೆಸ್ಟ್: ಭಾರತಕ್ಕೆ 208 ರನ್ ಗುರಿ ನೀಡಿದ ದಕ್ಷಿಣ ಆಫ್ರಿಕಾ
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲ್ಲಲು 208 ರನ್ ಗಳ ಗುರಿ ಪಡೆದಿದೆ...

Published On :
ಕೇಪ್ ಟೌನ್: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲ್ಲಲು 208 ರನ್ ಗಳ ಗುರಿ ಪಡೆದಿದೆ.
ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಆಫ್ರಿಕಾ ತಂಡವನ್ನು 130 ರನ್ ಗಳಿಗೆ ಆಲೌಟ್ ಮಾಡಿದ್ದು ಇದರೊಂದಿಗೆ ಭಾರತ ಗೆಲ್ಲಲು 208 ರನ್ ಗುರಿ ಪಡೆದಿದೆ.
ಎರಡನೇ ಇನ್ನಿಂಗ್ಸ್ ನಲ್ಲಿ ಆಫ್ರಿಕಾ ಬ್ಯಾಟ್ಸ್ ಮನ್ ಗಳು ಭಾರತೀಯ ಆಟಗಾರರ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದರು. ಆರಂಭಿಕರಾಗಿ ಕಣಕ್ಕಿಳಿದ ಮಾರ್ಕ್ರಮ್ 34, ಎಲ್ಗರ್ 25 ಹಾಗೂ ಎಬಿಡಿ ವಿಲಿಯರ್ಸ್ 35 ರನ್ ಬಿಟ್ಟರೆ ಮತ್ಯಾರು ಎರಡಂಕ್ಕಿ ಕೂಡ ದಾಟಲಿಲ್ಲ.
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್ ನಲ್ಲಿ 286 ರನ್ ಗಳಿಸಿತ್ತು. ನಂತರ ಟೀಂ ಇಂಡಿಯಾ 209 ರನ್ ಗಳಿಗೆ ಆಲೌಟ್ ಆಗಿದ್ದು ಆಫ್ರಿಕಾ 77 ರನ್ ಗಳ ಮುನ್ನಡೆ ಸಾಧಿಸಿತ್ತು. ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಫ್ರಿಕಾ 130 ರನ್ ಗೆ ಸರ್ವಪತನ ಕಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


