ಆಫ್ರಿಕಾ ವಿರುದ್ಧ ಕೊಹ್ಲಿ ವಿಫಲ; ವ್ಯಾಪಕ ಟ್ರಾಲ್ ಬಳಿಕ ಪತ್ನಿ ಅನುಷ್ಕಾ ಭಾರತಕ್ಕೆ ವಾಪಸ್!
ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ಮಾಡಿದ ಕುರಿತಂತೆ ಟ್ವಿಟರ್ ನಲ್ಲಿ ವ್ಯಾಪಕವಾಗಿ ಟ್ರಾಲ್ ಗೆ ಒಳಗಾಗಿದ್ದ ಪತ್ನಿ ಅನುಷ್ಕಾ ಶರ್ಮಾ ಭಾರತಕ್ಕೆ ವಾಪಸ್ ಆಗಿದ್ದಾರೆ.

Published On :
ಮುಂಬೈ: ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ಮಾಡಿದ ಕುರಿತಂತೆ ಟ್ವಿಟರ್ ನಲ್ಲಿ ವ್ಯಾಪಕವಾಗಿ ಟ್ರಾಲ್ ಗೆ ಒಳಗಾಗಿದ್ದ ಪತ್ನಿ ಅನುಷ್ಕಾ ಶರ್ಮಾ ಭಾರತಕ್ಕೆ ವಾಪಸ್ ಆಗಿದ್ದಾರೆ.
ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ತಂಡದ ವಿರುದ್ದದ ಮೊದಲ ಇನ್ನಿಂಗ್ಸ್ ನಲ್ಲಿ ಕೊಹ್ಲಿ ಕೇವಲ 5 ರನ್ ಗಳಿಗೆ ಔಟ್ ಆಗಿದ್ದರು. ವಿಶೇಷವೆಂದರೆ ಈ ವೇಳೆ ಕೊಹ್ಲಿ ಪತ್ನಿ ಅನುಷ್ಕಾ ಕೂಡ ಪ್ರೇಕ್ಷಕರ ಗ್ಯಾಲರಿಯಲ್ಲಿ ನಿಂತು ವಿರಾಟ್ ಗೆ ಹುರಿದುಂಬಿಸುತ್ತಿದ್ದರು. ಆದರೆ ಕೊಹ್ಲಿ ಕೇವಲ 5 ರನ್ ಗಳಿಗೆ ಔಟ್ ಆಗಿ ಪತ್ನಿ ಮಾತ್ರವಲ್ಲದೇ ಅಭಿಮಾನಿಗಳಿಗೂ ನಿರಾಶೆ ಮೂಡಿಸಿದ್ದರು.
ಇನ್ನು ಈ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಕೊಹ್ಲಿ ಮತ್ತು ಅನುಷ್ಕಾ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅನುಷ್ಕಾರಿಂದಾಗಿಯೇ ಕೊಹ್ಲಿ ಔಟ್ ಆದರು ಎನ್ನುವ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದಲ್ಲದೇ ಅನುಷ್ಕಾರನ್ನು ವ್ಯಾಪಕ ಟ್ರಾಲ್ ಮಾಡಲಾಗಿತ್ತು. ಇದರ ಬೆನ್ನಲ್ಲೇ ಅನುಷ್ಕಾ ಭಾರತಕ್ಕೆ ವಾಪಸ್ ಆಗಿದ್ದು, ನಿನ್ನೆ ಮುಂಬೈ ವಿಮಾನ ನಿಲ್ದಾಣಕ್ಕೆ ಅನುಷ್ಕಾ ಬಂದಿಳಿದಿದ್ದಾರೆ. ನಟಿ ಅನುಷ್ಕಾ ಆನಂದ್ ಎಲ್ ರಾಯ್ ಚಿತ್ರದಲ್ಲಿ ನಟಿಸುತ್ತಿದ್ದು. ಅದರ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ಇದೇ ಕಾರಣಕ್ಕೆ ಅನುಷ್ಕಾ ವಾಪಸ್ ಆಗಿದ್ದು, ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು ಈ ಚಿತ್ರದಲ್ಲಿ ಕತ್ರಿನಾ ಕೈಫ್ ಹಾಗೂ ಶಾರುಕ್ ಖಾನ್ ಜೊತೆ ಅನುಷ್ಕಾ ನಟಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್MumbaiಮುಂಬೈBollywoodಬಾಲಿವುಡ್Anushka Sharmaಅನುಷ್ಕಾ ಶರ್ಮಾVirat Kohliವಿರಾಟ್ ಕೊಹ್ಲಿSouth Africa Seriesದಕ್ಷಿಣ ಆಫ್ರಿಕಾ ಸರಣಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


