2ನೇ ಟೆಸ್ಟ್ ಪಂದ್ಯ: ಭಾರತದ ವಿರುದ್ಧ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ
ಪ್ರವಾಸಿ ಭಾರತ ತಂಡದ ವಿರುದ್ಧ ಸೆಂಚೂರಿಯನ್ ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

Published On :
ಸೆಂಚೂರಿಯನ್: ಪ್ರವಾಸಿ ಭಾರತ ತಂಡದ ವಿರುದ್ಧ ಸೆಂಚೂರಿಯನ್ ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಕೇಪ್ ಟೌನ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಅತಿಥೇಯರ ವಿರುದ್ಧ 72 ರನ್ ಗಳ ವಿರೋಚಿತ ಸೋಲು ಅನುಭವಿಸಿರುವ ಕೊಹ್ಲಿ ಪಡೆ ಈ ಪಂದ್ಯವನ್ನು ಗೆದ್ದು ಸೇಡು ತೀರಿಸಿಕೊಳ್ಳುವ ತವಕದಲ್ಲಿದ್ದು, ಮೊದಲ ಪಂದ್ಯದ ಗೆಲುವಿನ ಹುಮ್ಮಸ್ಸಿನಲ್ಲಿರುವ ಡುಪ್ಲೆಸಿಸ್ ಪಡೆ ಎರಡನೇ ಪಂದ್ಯವನ್ನೂ ಗೆದ್ದು ಸರಣಿಯಲ್ಲಿ ಪ್ರಭುತ್ವ ಸಾಧಿಸಲು ಹವಣಿಸಿದೆ. ಹೀಗಾಗಿ ಮೊದಲ ಪಂದ್ಯದಂತೆ ಈ ಪಂದ್ಯವೂ ಕೂಡ ಕದನ ಕುತೂಹಲಕಾರಿಯಾಗಿರುವುದರಲ್ಲಿ ಎರಡು ಮಾತಿಲ್ಲ.
ಇನ್ನು ಭಾರತ ತಂಡದಲ್ಲಿ ಮೂರು ಪ್ರಮುಖ ಬದಲಾವಣೆ ಮಾಡಲಾಗಿದ್ದು, ಪಾರ್ಥಿವ್ ಪಟೇಲ್, ಕೆಎಲ್ ರಾಹುಲ್, ಇಶಾಂತ್ ಶರ್ಮಾ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಉಳಿದಂತೆ ದಕ್ಷಿಣ ಆಫ್ರಿಕಾ ತಂಡ ಕೇಪ್ ಟೌನ್ ನಲ್ಲಿ ಆಡಿದ್ದ ತಂಡವನ್ನೇ ಮುಂದುವರೆಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್2nd test matchIndia vs south africaಭಾರತ ವರ್ಸಸ್ ದಕ್ಷಿಣ ಆಫ್ರಿಕಾ2ನೇ ಟೆಸ್ಟ್ ಪಂದ್ಯCenturionಸೆಂಚೂರಿಯನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


