ಅಂಡರ್ 19 ಕ್ರಿಕೆಟ್ ವಿಶ್ವಕಪ್: ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಅಂಡರ್ 19 ಕ್ರಿಕೆಟ್ ವಿಶ್ವಕಪ್ ನ ತನ್ನ ಚೊಚ್ಚಲ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರಬಲ ಆಸ್ಟ್ರೇಲಿಯಾ ತಂಡದ ವಿರುದ್ಧ 100 ರನ್ ಗಳ ಭರ್ಜರಿ ಜಯ ಸಾಧಿಸಿದೆ.

Published On :
ಬೇ ಓವಲ್: ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಅಂಡರ್ 19 ಕ್ರಿಕೆಟ್ ವಿಶ್ವಕಪ್ ನ ತನ್ನ ಚೊಚ್ಚಲ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರಬಲ ಆಸ್ಟ್ರೇಲಿಯಾ ತಂಡದ ವಿರುದ್ಧ 100 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ಭಾರತ ನೀಡಿದ್ದ 329 ರನ್ ಗಳ ಗುರಿಯನ್ನು ಬೆನ್ನ ಹತ್ತಿದ ಆಸ್ಟ್ರೇಲಿಯಾ ತಂಡ 42.5 ಓವರ್ ಗಳಲ್ಲಿ 228 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ ಭಾರತದ ವಿರುದ್ಧ 100 ರನ್ ಗಳ ಹೀನಾಯ ಸೋಲು ಅನುಭವಿಸಿತು. ಆಸಿಸ್ ಪರ ಆರಂಭಿಕ ಆಟಗಾರ ಜಾಕ್ ಎಡ್ವರ್ಡ್ಸ್ (73 ರನ್) ಅವರನ್ನು ಹೊರತು ಪಡಿಸಿದರೆ ಉಳಿದ ಆಟಗಾರರು ಭಾರತಕ್ಕೆ ಪ್ರಬಲ ಉತ್ತರ ನೀಡುವಲ್ಲಿ ವಿಫಲರಾದರು. ಮಧ್ಯಮ ಕ್ರಮಾಂಕದಲ್ಲಿ ಜೋನಾಥನ್ ಮೆರ್ಲೋ ವಿಕೆಟ್ ಪತನವಾಗುತ್ತಿದ್ದಂತೆಯೇ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಆಸಿಸ್, 228 ರನ್ ಗಳಿಗೆ ಆಲೌಟ್ ಆಯಿತು.
ಇನ್ನು ಭಾರತದ ಪರ ಶಿಮಂ ಮಾವಿ ಮತ್ತು ಕಮಲೇಶ್ ನಗರ್ಕೋಟಿ ತಲಾ 3 ವಿಕೆಟ್ ಪಡೆದರೆ, ಸುಧಾಕರ್ ರಾಯ್, ಅಭಿಷೇಕ್ ಶರ್ಮಾ ತಲಾ 1 ವಿಕೆಟ್ ಪಡೆದರು.
ಇದಕ್ಕೂ ಮೊದಲು ಟಾಸ್ ಗೆದ್ದ ಭಾರತ ತಂಡದ ನಾಯಕ ಪೃಥ್ವಿ ಚೌಹಾಣ್ (94 ರನ್), ಮನೋಜ್ ಕಲ್ರಾ (86 ರನ್) ಮತ್ತು ಶಬ್ ಮನ್ ಗಿಲ್ (63 ರನ್) ಅವರ ಉತ್ತಮ ಬ್ಯಾಟಿಂಗ್ ಪ್ರದರ್ಶನದಿಂದಾಗಿ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 328 ರನ್ ಕಲೆಹಾಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CricketNew ZealandIndia vs Australiaಭಾರತ ವರ್ಸಸ್ ಆಸ್ಟ್ರೇಲಿಯಾBay OvalICC Under 19 World Cupಬೇ ಓವಲ್ಐಸಿಸಿ ಅಂಡರ್ 19 ವಿಶ್ವಕಪ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


