ಟಿ20 ಇತಿಹಾಸದಲ್ಲೇ 2ನೇ ವೇಗದ ಶತಕ ಸಿಡಿಸಿದ ರಿಷಭ್ ಪಂತ್
ಟಿ20 ಇತಿಹಾಸದಲ್ಲೇ ರಿಷಭ್ ಪಂತ್ ಎರಡನೇ ಅತಿ ವೇಗದ ಶತಕ ಸಿಡಿಸಿದ್ದು ಟಿ20ನಲ್ಲಿ ಭಾರತ ಪರ ಅತಿ ವೇಗದ ಶತಕ ಬಾರಿಸಿದ ಗೌರವಕ್ಕೆ ಪಾತ್ರರಾಗಿದ್ದಾರೆ...

Published On :
ನವದೆಹಲಿ: ಟಿ20 ಇತಿಹಾಸದಲ್ಲೇ ರಿಷಭ್ ಪಂತ್ ಎರಡನೇ ಅತಿ ವೇಗದ ಶತಕ ಸಿಡಿಸಿದ್ದು ಟಿ20ನಲ್ಲಿ ಭಾರತ ಪರ ಅತಿ ವೇಗದ ಶತಕ ಬಾರಿಸಿದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸೈಯದ್ ಮುಷ್ತಾಕ್ ಅಲಿ ಉತ್ತರ ವಲಯ ಟಿ20 ಟೂರ್ನಿಯಲ್ಲಿ ದೆಹಲಿ ಪರ ರಿಷಭ್ ಪಂತ್ 32 ಎಸೆತಗಳಲ್ಲಿ ಶತಕ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಮೊದಲು ಬ್ಯಾಟಿಂಗ್ ಮಾಡಿದ ಹಿಮಾಚಲ ಪ್ರದೇಶ ದೆಹಲಿ ತಂಡಕ್ಕೆ 145 ರನ್ ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ದೆಹಲಿ ಪರ ರಿಷಭ್ ಪಂತ್ 38 ಎಸೆತಗಳಲ್ಲಿ ಎಂಟು ಬೌಂಡರಿ ಹಾಗೂ 12 ಸಿಕ್ಸರ್ ಗಳ ನೆರವಿನಿಂದ 116 ರನ್ ಗಳಿಸಿ ಅಜೇಯರಾಗಿ ಉಳಿದರು.
ಟಿ20ನಲ್ಲಿ ಅತಿ ವೇಗದ ಶತಕ ವೆಸ್ಟ್ ಇಂಡೀಸ್ ಕ್ರಿಸ್ ಗೇಲ್ ಹೆಸರಲ್ಲಿದೆ. 2013ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಪುಣೆ ವಾರಿಯರ್ಸ್ ವಿರುದ್ಧ ಗೇಲ್ ಕೇವಲ 30 ಎಸೆತಗಳಲ್ಲಿ ಶತಕ ಸಿಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


