ಕ್ರಿಕೆಟ್

3ನೇ ಟೆಸ್ಟ್: 8 ವರ್ಷಗಳ ಬಳಿಕ ದಿನೇಶ್ ಕಾರ್ತಿಕ್ ಭಾರತ ತಂಡದ ಟೆಸ್ಟ್ ಕೀಪರ್‌ ಆಗಿ ಕಣಕ್ಕೆ!

ಟೀಂ ಇಂಡಿಯಾದ ಟೆಸ್ಟ್ ತಂಡದ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ ಗಾಯಗೊಂಡಿದ್ದು ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ದಿನೇಶ್ ಕಾರ್ತಿಕ್...

3ನೇ ಟೆಸ್ಟ್: 8 ವರ್ಷಗಳ ಬಳಿಕ ದಿನೇಶ್ ಕಾರ್ತಿಕ್ ಭಾರತ ತಂಡದ ಟೆಸ್ಟ್ ಕೀಪರ್‌ ಆಗಿ ಕಣಕ್ಕೆ!
ದಿನೇಶ್ ಕಾರ್ತಿಕ್
Published On :
ಸೆಂಚೂರಿಯನ್: ಟೀಂ ಇಂಡಿಯಾದ ಟೆಸ್ಟ್ ತಂಡದ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ ಗಾಯಗೊಂಡಿದ್ದು ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ಕಣಕ್ಕಿಳಿಯಲಿದ್ದಾರೆ. 
ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಜನವರಿ 11ರಂದು ಅಭ್ಯಾಸದಲ್ಲಿ ತೊಡಗಿದ್ದಾಗ ವೃದ್ಧಿಮಾನ್ ಸಾಹಾ ಅವರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ  ಎರಡನೇ ಟೆಸ್ಟ್ ನಲ್ಲಿ ಸಾಹಾ ಬದಲಿಗೆ ಪಾರ್ಥಿವ್ ಪಟೇಲ್ ಕಣಕ್ಕಿಳಿದಿದ್ದರು. 
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯ ಜನವರಿ 24ರಂದು ಪ್ರಾರಂಭವಾಗಲಿದ್ದು ಸಾಹಾ ಬದಲಿಗೆ ದಿನೇಶ್ ಕಾರ್ತಿಕ್ ರನ್ನು ಆಯ್ಕೆ ಮಾಡಲಾಗಿದೆ ಎಂದು ಟೀಂ ಇಂಡಿಯಾ ಆಯ್ಕೆ ಸಮಿತಿ ಹೇಳಿದೆ. 
32 ವರ್ಷದ ದಿನೇಶ್ ಕಾರ್ತಿಕ್ ಪ್ರಸ್ತುತ 23 ಟೆಸ್ಟ್ ಪಂದ್ಯಗಳನ್ನು ಆಡಿದ್ದು 2010ರಲ್ಲಿ ಬಾಂಗ್ಲಾದೇಶ  ವಿರುದ್ಧ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ದಿನೇಶ್ ಒಟ್ಟಾರೆ 51 ಕ್ಯಾಚ್ ಗಳನ್ನು ಹಿಡಿದ್ದು ಐದು ಸ್ಟಂಪ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.