ಸೆಂಚುರಿಯನ್ ನಲ್ಲಿ ವಿಶ್ವದ ನಂ.1 ತಂಡಕ್ಕೆ ಮುಖಭಂಗ, ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಸರಣಿ ಸೋಲು
ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ 135 ರನ್‌ಗಳ ಹೀನಾಯ....

Published On :
ಸೆಂಚುರಿಯನ್: ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ 135 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಇನ್ನು ಒಂದು ಪಂದ್ಯ ಬಾಕಿ ಉಳಿದಿರುವಂತೆಯೇ 0-2ರ ಅಂತರದಲ್ಲಿ ಸರಣಿ ಸೋತು ಮುಖಭಂಗಕ್ಕೊಳಗಾಗಿದೆ.
ದಕ್ಷಿಣ ಆಫ್ರಿಕಾ ನೀಡಿದ್ದ 287 ರನ್ ಬೆನ್ನತ್ತಿದ ಭಾರತೀಯ ತಂಡ ಯಾವುದೇ ಕಠಿಣ ಹೋರಾಟ ನಡೆಸದೆ 50.2 ಓವರ್‌ಗಳಲ್ಲಿ 151 ರನ್‌ಗಳಿಗೆ ಸರ್ವಪತನವನ್ನು ಕಂಡಿತ್ತು.
ಮೊದಲ ಇನ್ನಿಂಗ್ಸ್ನಲ್ಲಿ ದಕ್ಷಿಣ ಆಫ್ರಿಕಾ 335, ಭಾರತ 307 ರನ್ ಗಳಿಸಿದ್ದರೆ 2ನೇ ಇನ್ನಿಂಗ್ಸ್ನಲ್ಲಿ ದಕ್ಷಿಣ ಆಫ್ರಿಕಾ 258, ಭಾರತ 151 ರನ್ ಗಳಿಸಿ ಸೋಲೊಪ್ಪಿಕೊಂಡಿದೆ.
ಭಾರತದ ಪರ ಮುರಳಿ ವಿಜಯ್ 9, ಕೆ ಎಲ್ ರಾಹುಲ್ 4, ವಿರಾಟ್ ಕೊಹ್ಲಿ 5, ಚೇತೇಶ್ವರ ಪೂಜಾರ 19, ಪಾರ್ಥಿವ್ ಪಟೇಲ್ 19, ರೋಹಿತ್ ಶರ್ಮಾ 47, ಹಾರ್ದಿಕ್ ಪಾಂಡ್ಯ 6, ರವಿಚಂದ್ರನ್ ಅಶ್ವಿನ್ 3, ಮೊಹಮ್ಮದ್ ಶಮಿ 28, ಜಸ್ಪ್ರೀತ್ ಬುಮ್ರಾ 2 ಮತ್ತು ಇಶಾಂತ್ ಶರ್ಮಾ 4 ರನ್ ಗಳಿಸಿದ್ದಾರೆ.
ದಕ್ಷಿಣ ಆಫ್ರಿಕಾ ಪರ ಎನ್ಜಿಡಿ 6, ಕಗಿಸೋ ರಬಡಾಗೆ 3 ವಿಕೆಟ್ ಕಬಳಿಸಿದ್ದಾರೆ.
ಕೇಪ್ ಟೌನ್‌ನಲ್ಲಿ ನಡೆದ ಮೊದಲ ಟೆಸ್ಟ್ ನಲ್ಲಿ 72 ರನ್ ಅಂತರದಿಂದ ಸೋಲು ಅನುಭವಿಸಿದ್ದ ಟೀಂ ಇಂಡಿಯಾ ಸೆಂಚುರಿಯನ್‌ನಲ್ಲಿ 135 ರನ್ ಅಂತರದ ಹೀನಾಯ ಸೋಲು ಅನುಭವಿಸಿದೆ. ಇದರೊಂದಿಗೆ ಸರಣಿ ಕ್ಲೀನ್ ಸ್ವೀಪ್ ಭೀತಿ ಎದುರಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


