ಕ್ರಿಕೆಟ್

ಬಹುಬೇಗ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳುವುದು ಒಳ್ಳೆಯದ್ದು: ಮಿಥಾಲಿ ರಾಜ್

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಪುರುಷರ ತಂಡ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸೋತು ಸುಣ್ಣವಾಗಿದ್ದು ಇದರಿಂದ ಎಚ್ಚೆತ್ತಿರುವ ಮಧ್ಯೆ ಟೀಂ...

ಬಹುಬೇಗ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳುವುದು ಒಳ್ಳೆಯದ್ದು: ಮಿಥಾಲಿ ರಾಜ್
ಮಿಥಾಲಿ ರಾಜ್
Published On :
ಮುಂಬೈ: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಪುರುಷರ ತಂಡ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸೋತು ಸುಣ್ಣವಾಗಿದ್ದು ಇದರಿಂದ ಎಚ್ಚೆತ್ತಿರುವ ಮಧ್ಯೆ ಟೀಂ ಇಂಡಿಯಾ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್ ಮುಂಬರುವ ಆಫ್ರಿಕಾ ಪ್ರವಾಸಕ್ಕೆ ಬೇಗ ಹೋದರೆ ನಮ್ಮಗೆ ಹೆಚ್ಚು ಸಹಾಯಕವಾಗಲಿದೆ ಎಂದು ಹೇಳಿದ್ದಾರೆ. 
ವಿದೇಶಗಳಲ್ಲಿ ಸರಣಿಗಳನ್ನು ಆಡುವುದು ತಂಡಕ್ಕೆ ಸವಾಲಾಗಿರುತ್ತದೆ. ಇದರಿಂದಾಗಿ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗಾಗಿ ನಮ್ಮ ತಂಡ ಬಹುಬೇಗ ಆಫ್ರಿಕಾಗೆ ತೆರಳಿದರೆ ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಬಹುದು ಎಂದು ಮಿಥಾಲಿ ರಾಜ್ ಹೇಳಿದ್ದಾರೆ. 
2017ರ ಐಸಿಸಿ ಮಹಿಳಾ ವಿಶ್ವಕಪ್ ಪಂದ್ಯಾವಳಿಗಾಗಿ ನಮ್ಮ ತಂಡ ಬೇಗನೆ ಇಂಗ್ಲೆಂಡ್ ಗೆ ತೆರಳಿತ್ತು. ಇದರಿಂದಾಗಿಯೇ ನಾವು ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಲು ಸಾಧ್ಯವಾಯಿತು. ನಾವು ಮುಂಚಿತವಾಗಿಯೇ ಅಲ್ಲಿಗೆ ತಲುಪಿದಾಗ ವಾತಾವರಣಕ್ಕೆ ಒಗ್ಗಿಕೊಳ್ಳಲು ಸಮಯ ಸಿಗುತ್ತದೆ. ಸಾಮಾನ್ಯವಾಗಿ ನಾವು ಏಷ್ಯಾದ ಪರಿಸ್ಥಿತಿಗಳಲ್ಲಿ ಎದುರಿಸದ ರೀತಿಯ ಬೌನ್ಸ್ ಗಳಿಗೆ ನಾವು ಒಗ್ಗಿಕೊಳ್ಳಬಹುದು ಎಂದರು. 
ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮಹಿಳೆ ತಂಡ ಮೂರು ಏಕದಿನ ಪಂದ್ಯಗಳ ಸರಣಿ ಮತ್ತು ಐದು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಮೊದಲ ಏಕದಿನ ಪಂದ್ಯ ಕೆಂಬರ್ಲಿಯಲ್ಲಿ ಫೆಬ್ರವರಿ 5ರಂದು ನಡೆಯಲಿದೆ. 
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಪುರುಷರ ತಂಡ ಟೆಸ್ಟ್ ಸರಣಿಯಲ್ಲಿ 0-2 ಅಂತರದಿಂದ ಸೋತು ಸರಣಿಯನ್ನು ಕೈಚೆಲ್ಲಿದ್ದು ಟೀಕೆಗೆ ಗುರಿಯಾಗಿದೆ. ಇನ್ನು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಸಹ 10 ದಿನ ಮುಂಚಿತವಾಗಿಯೇ ದಕ್ಷಿಣ ಆಫ್ರಿಕಾ ಪ್ರವಾಸಕೈಗೊಳ್ಳಬೇಕಿತ್ತು ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.