ಕೋಚ್ ರವಿಶಾಸ್ತ್ರಿ ಅಭಿಪ್ರಾಯ ವಿರೋಧಿಸಿದ ವಿರಾಟ್ ಕೊಹ್ಲಿ!
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ನಂತರ ಟೀಂ ಇಂಡಿಯಾದ ಕೋಚ್ ರವಿಶಾಸ್ತ್ರಿ ಭಾರತ ಇನ್ನೂ 10 ದಿನ ಮುಂಚಿತವಾಗಿ ಬಂದು ಅಭ್ಯಾಸ ನಡೆಸಬೇಕಿತ್ತು ಎಂದು...

Published On :
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ನಂತರ ಟೀಂ ಇಂಡಿಯಾದ ಕೋಚ್ ರವಿಶಾಸ್ತ್ರಿ ಭಾರತ ಇನ್ನೂ 10 ದಿನ ಮುಂಚಿತವಾಗಿ ಬಂದು ಅಭ್ಯಾಸ ನಡೆಸಬೇಕಿತ್ತು ಎಂದು ಹೇಳಿದ್ದು ಇದಕ್ಕೆ ನಾಯಕ ವಿರಾಟ್ ಕೊಹ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.
ಟೀಂ ಇಂಡಿಯಾ ಸತತ ಸೋಲು ಕಂಡಿದ್ದರಿಂದ ತರಬೇತುದಾರ ರವಿಶಾಸ್ತ್ರಿ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದಕ್ಕೆ ಕೊಹ್ಲಿ ಹಾಗೇನಿಲ್ಲ ನಮಗೆ ಅಭ್ಯಾಸ ನಡೆಸಲು 5 ದಿನ ಅವಕಾಶವಿತ್ತು. ನಾವು ಚೆನ್ನಾಗಿಯೇ ಅಭ್ಯಾಸ ನಡೆಸಿದ್ದೇವೆ ಎಂದು ಹೇಳಿದ್ದಾರೆ.
ನಾವು ಸುಮ್ಮನೆ ಇಲ್ಲಿ ಕುಳಿತು ಬೇರೆ ಯಾವುದೋ ಸಂಗತಿಗಳು ನಮ್ಮ ಸೋಲಿಗೆ ಕಾರಣ ಎಂದು ಹೇಳಲಾರೆ. ಸೋಲಿಗೆ ಕಾರಣ ನಮ್ಮದೇ ತಪ್ಪುಗಳು. ಪರಿಸ್ಥಿತಿಯ ಲಾಭ ಪಡೆಯಲು ವಿಫಲರಾಗಿದ್ದೇ ಇಲ್ಲಿ ಮುಖ್ಯವಾಗುತ್ತದೆ ಎಂದು ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ಎರಡು ಪಂದ್ಯಗಳಲ್ಲಿ ಸೋಲು ಕಾಣುವ ಮೂಲಕ ಸರಣಿ ಕೈಚೆಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿದಕ್ಷಿಣ ಆಫ್ರಿಕಾSouth AfricaRavi shastriರವಿಶಾಸ್ತ್ರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


