ಕ್ರಿಕೆಟ್

ಡಿಆರ್‌ಎಸ್‌ ತೆಗೆದುಕೊಳ್ಳುವಲ್ಲಿ ಎಡವಿದ ಕೊಹ್ಲಿ: ಡಿ ವಿಲಿಯರ್ಸ್‌ಗೆ ಜೀವದಾನ

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಡಿಆರ್‌ಎಸ್‌ ತೆಗೆದುಕೊಳ್ಳುವಲ್ಲಿ ಎಡವಿದ ಪರಿಣಾಮ...

ಡಿಆರ್‌ಎಸ್‌ ತೆಗೆದುಕೊಳ್ಳುವಲ್ಲಿ ಎಡವಿದ ಕೊಹ್ಲಿ: ಡಿ ವಿಲಿಯರ್ಸ್‌ಗೆ ಜೀವದಾನ
ವಿರಾಟ್ ಕೊಹ್ಲಿ
Published On :
ಜೋಹಾನ್ಸ್ ಬರ್ಗ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಡಿಆರ್‌ಎಸ್‌ ತೆಗೆದುಕೊಳ್ಳುವಲ್ಲಿ ಎಡವಿದ ಪರಿಣಾಮ ಎಬಿ ಡಿ ವಿಲಿಯರ್ಸ್ ಗೆ ಜೀವದಾನ ಸಿಕ್ಕಿದೆ. 
ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ತಂಡ 81 ರನ್ ಗಳಿಸಿದ್ದಾಗ ಎಬಿಡಿ ವಿಲಿಯರ್ಸ್ ಅವರನ್ನು ವೇಗಿ ಇಶಾಂತ್ ಶರ್ಮಾ ಎಲ್ಬಿಡಬ್ಲ್ಯೂ ಬಲೆಗೆ ಬೀಳಿಸಿದ್ದರು. ಆದರೆ ಫೀಲ್ಡ್ ಅಂಪೈರ್ ನಾಟೌಟ್ ಎಂದು ಘೋಷಿಸಿದ್ದರು. ಈ ವೇಳೆ ಡಿಆರ್ಎಸ್ ಮೊರೆ ಹೋಗುವ ಅವಕಾಶವಿದ್ದರೂ ನಾಯಕ ವಿರಾಟ್ ಕೊಹ್ಲಿ ಆಸಕ್ತಿ ತೋರಲಿಲ್ಲ. ಅದೇ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇದ್ದರೆ ಮಾತ್ರ ಅವರು ಡಿಆರ್ಎಸ್ ತೆಗೆದುಕೊಳ್ಳದೆ ಬಿಡುತ್ತಿರಲಿಲ್ಲ. 
ಡಿಆರ್ಎಸ್ ನಲ್ಲಿ ಎಂಎಸ್ ಧೋನಿ ಓರ್ವ ಚಾಣಾಕ್ಷ ಆಟಗಾರನಾಗಿದ್ದರು. ಧೋನಿ ಡಿಆರ್ಎಸ್ ನಲ್ಲಿ ಎಡವಿದ ಸಂದರ್ಭಗಳು ಕಡಿಮೆ. ಹೀಗಾಗಿ ಅವರಿಗೆ ಧೋನಿ ಪರಾಮರ್ಶೆ ವ್ಯವಸ್ಥೆ(ಡಿಆರ್ಎಸ್) ಎಂದು ಕರೆಯುವ ವಾಡಿಕೆಯಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.