2018 ಐಪಿಎಲ್: ಬೇರೆ ರಾಜ್ಯದ ಫ್ರಾಂಚೈಸಿ ಪಾಲಾದ ಕನ್ನಡಿಗ ಕ್ರಿಕೆಟಿಗರು ಇವರು!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಕರ್ನಾಟಕದ ಆಟಗಾರರಾದ ಕೆಎಲ್ ರಾಹುಲ್, ಮನೀಷ್ ಪಾಂಡೆ ಮತ್ತು ಕರುಣ್ ನಾಯರ್ ದುಬಾರಿ ಮೊತ್ತಕ್ಕೆ ಸೇಲಾಗಿದ್ದಾರೆ...

Published On :
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಕರ್ನಾಟಕದ ಆಟಗಾರರಾದ ಕೆಎಲ್ ರಾಹುಲ್, ಮನೀಷ್ ಪಾಂಡೆ ಮತ್ತು ಕರುಣ್ ನಾಯರ್ ದುಬಾರಿ ಮೊತ್ತಕ್ಕೆ ಸೇಲಾಗಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ಹರಾಜು ಪ್ರಕ್ರಿಯೆಯಲ್ಲಿ ಕೆಎಲ್ ರಾಹುಲ್ ಅವರಿಗೆ 11 ಕೋಟಿ ಹಾಗೂ ಕರುಣ್ ನಾಯರ್ ಅವರಿಗೆ 5.6 ಕೋಟಿ ನೀಡಿ ಪಂಜಾಬ್ ಖರೀದಿಸಿದೆ. ಇನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ ಸ್ಫೋಟಕ ಬ್ಯಾಟ್ಸ್ ಮನ್ ಮನೀಶ್ ಪಾಂಡೆಗೆ 11 ಕೋಟಿ ರುಪಾಯಿಗೆ ಖರೀದಿಸಿದೆ.
ಮನೀಶ್ ಪಾಂಡೆ ಐಪಿಎಲ್ 10ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಆಡಿದ್ದರು. ಈ ಬಾರಿ ಮನೀಶ್ ರನ್ನು ಖರೀದಿಸಲು ಕೆಕೆಆರ್ ನಿರಾಸಕ್ತಿ ತೋರಿದೆ. ಇನ್ನು 50 ಲಕ್ಷ ಮುಖ ಬೆಲೆಯ ಕರುಣ್ ನಾಯರ್ ಅವರನ್ನು ಪಂಜಾಬ್ ಫ್ರಾಂಚೈಸಿ 5.6 ಕೋಟಿ ರುಪಾಯಿಗೆ ಖರೀದಿಸಿದೆ.
ಇನ್ನು ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಅವರು ಐಪಿಎಲ್ 10ನೇ ಆವೃತ್ತಿಯಲ್ಲಿ ಗಾಯಗೊಂಡಿದ್ದರಿಂದ ಪಂದ್ಯಾವಳಿಯಿಂದ ದೂರ ಉಳಿದಿದ್ದರು. ಈಗಿದ್ದರು ಇದೀಗ ಕೆಎಲ್ ರಾಹುಲ್ ಅವರಿಗೆ 11 ಕೋಟಿ ರುಪಾಯಿ ನೀಡಿ ದುಬಾರಿ ಮೊತ್ತಕ್ಕೆ ಪಂಜಾಬ್ ಖರೀದಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್AuctionಹರಾಜುKL RahulManish Pandeyಕೆಎಲ್ ರಾಹುಲ್Karun Nairಕರುಣ್ ನಾಯರ್ಮನೀಶ್ ಪಾಂಡೆIPL 2018ಐಪಿಎಲ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


