ಹೈದರಾಬಾದ್: ಕ್ರಿಕೆಟ್ ಆಡುವಾಗ ಮೈದಾನದಲ್ಲೇ ಕುಸಿದು ಬಿದ್ದು ಯುವಕ ಸಾವು
ಸ್ಥಳೀಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೌಲಿಂಗ್ ಮಾಡುತ್ತಿದ್ದ ವೇಳೆ ಮೈದಾನದಲ್ಲೇ ಕುಸಿದು ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ...

Published On :
ಹೈದರಾಬಾದ್: ಸ್ಥಳೀಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೌಲಿಂಗ್ ಮಾಡುತ್ತಿದ್ದ ವೇಳೆ ಮೈದಾನದಲ್ಲೇ ಕುಸಿದು ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
23 ವರ್ಷದ ಲಾಯ್ಡ್ ಅಂಥೋನಿ ಮೃತ ಯುವಕ ಎಂದು ಗುರುತಿಸಲಾಗಿದೆ. ಈತ ಕಳೆದ ರಾತ್ರಿ ಸ್ಥಳೀಯ ತಂಡಗಳ ನಡುವೆ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯದ ವೇಳೆ ಮೃತಪಟ್ಟಿದ್ದು ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕ್ರಿಕೆಟ್ ಪಂದ್ಯದಲ್ಲಿ ಅಂಥೋನಿ ಬೌಲಿಂಗ್ ಮಾಡುತ್ತಿದ್ದ. ಮೊದಲಿಗೆ ಒಂದೆರೆಡು ಎಸೆತಗಳನ್ನು ಮಾಡಿದ್ದ ಅಂಥೋನಿ ನಂತರ ಬೌಲಿಂಗ್ ಮಾಡುವ ಮುನ್ನವೇ ಕುಸಿದು ಬಿದ್ದಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಇತರ ಆಟಗಾರರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರು. ಆದರೆ ಅಷ್ಟರಲ್ಲಾಗಲೆ ಅಂಥೋನಿಯ ಪ್ರಾಣಪಕ್ಷಿ ಹಾರಿಹೋಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


