ಕ್ರಿಕೆಟ್

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ, ತಂಡಕ್ಕೆ ಮರಳಿದ ರೈನಾ!

ಮುಂಬರುವ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಟಿ20 ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ತಂಡದ ಮಧ್ಯಮ ಕ್ರಮಾಂಕದ ಆಟಗಾರ ಸುರೇಶ್ ರೈನಾ ತುಂಬಾ ದಿನಗಳ ಬಳಿಕ ತಂಡಕ್ಕೆ ಮರಳಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ, ತಂಡಕ್ಕೆ ಮರಳಿದ ರೈನಾ!
ಸಂಗ್ರಹ ಚಿತ್ರ
Published On :
ಮುಂಬೈ: ಮುಂಬರುವ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಟಿ20 ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ತಂಡದ ಮಧ್ಯಮ ಕ್ರಮಾಂಕದ ಆಟಗಾರ ಸುರೇಶ್ ರೈನಾ ತುಂಬಾ ದಿನಗಳ ಬಳಿಕ ತಂಡಕ್ಕೆ ಮರಳಿದ್ದಾರೆ.
ಇದೇ ಫೆಬ್ರವರಿ 18ರಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದ್ದು, ಈ ಸರಣಿಗಾಗಿ ಇಂದು ಬಿಸಿಸಿಐ ತಂಡವನ್ನು ಪ್ರಕಟಿಸಿದೆ. ಪ್ರಮುಖವಾಗಿ ಈ ಹಿಂದೆ ತಂಡದಿಂದ ದೂರ ಉಳಿದಿದ್ದ  ಸುರೇಶ್ ರೈನಾ ಕಮ್ ಬ್ಯಾಕ್ ಮಾಡಿದ್ದು, ಬರೊಬ್ಬರಿ 11 ತಿಂಗಳುಗಳ ಬಳಿಕ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ನಡೆದ ಸಯ್ಯದ್ ಮುಷ್ತಾಕ್ ಅಲಿ ಟಿ20 ಸರಣಿಯಲ್ಲಿ ರೈನಾ ಸ್ಫೋಟಕ ಆಟವಾಡಿ ಭರ್ಜರಿ ಶತಕ  ಸಿಡಿಸಿದ್ದರು. ಅವರ ಈ ಒಂದು ಶತಕವೇ ಅವರು ಮತ್ತೆ ತಂಡಕ್ಕೆ ಆಯ್ಕೆಯಾಗುವಂತೆ ಮಾಡಿದೆ.
ಇದಲ್ಲದೆ ತಂಡದ ಉದಯೋನ್ಮುಖ ಆಟಗಾರರಾದ ಜಯ್ ದೇವ್ ಉನಾದ್ಕತ್, ಶಾರ್ದೂಲ್ ಠಾಕೂರ್ ಅವರು ಕೂಡ ನಾಯಕ ವಿರಾಟ್ ಕೊಹ್ಲಿ ನೇತೃತ್ವದ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. 
ಭಾರತ ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್), ಶಿಖರ್ ಧವನ್, ಕೆಎಲ್ ರಾಹುಲ್, ಸುರೇಶ್ ರೈನಾ, ದಿನೇಶ್ ಕಾರ್ತಿಕ್, ಹಾರ್ದಿಕ್  ಪಾಂಡ್ಯಾ, ಮನೀಷ್ ಪಾಂಡೆ, ಅಕ್ಸರ್ ಪಟೇಲ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬುಮ್ರಾ, ಜಯದೇವ್ ಉನಾದ್ಕತ್, ಶಾರ್ದೂಲ್ ಠಾಕೂರ್..

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.