2018ರ ಐಪಿಎಲ್ ಹರಾಜು: ಕೊನೆಗೂ ಸೇಲಾದ ಕ್ರಿಸ್ ಗೇಯ್ಲ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಎರಡನೇ ದಿನದ ಹರಾಜು ಪ್ರಕ್ರಿಯೆಯ ಮೂರನೇ ಹರಾಜಿನಲ್ಲಿ ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್...

Published On :
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಎರಡನೇ ದಿನದ ಹರಾಜು ಪ್ರಕ್ರಿಯೆಯ ಮೂರನೇ ಹರಾಜಿನಲ್ಲಿ ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ರನ್ನು ಪಂಜಾಬ್ ತಂಡ ಖರೀದಿಸಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಹಾರಾಜಿನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೊನೆಗೆ ಕ್ರಿಸ್ ಗೇಯ್ಲ್ ಅವರ ಮುಖಬೆಲೆ 2 ಕೋಟಿ ರುಪಾಯಿ ಅವರನ್ನು ಖರೀದಿಸಿದೆ.
ಆ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ಪರ ಆಡಿದ್ದ ಕ್ರಿಸ್ ಗೇಯ್ಲ್ ರನ್ನು ಉಳಿಸಿಕೊಳ್ಳಲು ಆರ್ಸಿಬಿ ಹಿಂದೇಟು ಹಾಕಿತ್ತು. ವಿದೇಶಗಳಲ್ಲಿ ನಡೆದ ಟಿ20 ಪಂದ್ಯಾವಳಿಗಳಲ್ಲಿ ಕ್ರಿಸ್ ಗೇಯ್ಲ್ ಅಬ್ಬರದ ಬ್ಯಾಟಿಂಗ್ ನಡೆಸುತ್ತಿದ್ದರು. ನಿನ್ನೆ ನಡೆದ ಹರಾಜಿನಲ್ಲಿ ಅವರನ್ನು ಖರೀದಿಸಲು ತಂಡಗಳು ಹಿಂದೇಟು ಹಾಕಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಬೆಂಗಳೂರುBengaluruBCCIಬಿಸಿಸಿಐChris Gayleಕ್ರಿಸ್ ಗೇಯ್ಲ್IPL Auction 2018ಐಪಿಎಲ್ ಹರಾಜು 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


