ಕ್ರಿಕೆಟ್

ಐಪಿಎಲ್‌ನಿಂದ ಕ್ರಿಕೆಟ್ ಹಿತಾಸಕ್ತಿ ಸಾಧ್ಯವೇ: ಇದು ಯೋಚಿಸಬೇಕಾದ ಸಮಯ ಎಂದ ಬಾಂಬೆ ಹೈಕೋರ್ಟ್

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟೂರ್ನಿಯಿಂದ ಕ್ರಿಕೆಟ್ ಹಿತಾಸಕ್ತಿ ಸಾಧ್ಯವೇ ಎಂದು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ...

ಐಪಿಎಲ್‌ನಿಂದ ಕ್ರಿಕೆಟ್ ಹಿತಾಸಕ್ತಿ ಸಾಧ್ಯವೇ: ಇದು ಯೋಚಿಸಬೇಕಾದ ಸಮಯ ಎಂದ ಬಾಂಬೆ ಹೈಕೋರ್ಟ್
ಐಪಿಎಲ್
Published On :
ಮುಂಬೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟೂರ್ನಿಯಿಂದ ಕ್ರಿಕೆಟ್ ಹಿತಾಸಕ್ತಿ ಸಾಧ್ಯವೇ ಎಂದು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ. 
ಐಪಿಎಲ್ ಎಂದರೇ ಬೆಟ್ಟಿಂಗ್ ಮತ್ತು ಫಿಕ್ಸಿಂಗ್ ಎಂಬ ಭಾವನೆ ಜನರಲ್ಲಿ ಬೇರೂರಿದೆ. ಜತೆಗೆ ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆಯ ದೃಷ್ಟಿಯಿಂದ ಪಂದ್ಯಾವಳಿಯು ಕ್ರಿಕೆಟ್ ಆಟದ ಆಸಕ್ತಿಯನ್ನು ಹೊಂದಿದೆಯೇ ಎಂದು ಯೋಚಿಸಬೇಕಾದ ಸಮಯ ಬಂದಿದೆ ಎಂದು ಬಾಂಬೆ ಹೈಕೋರ್ಟ್ ನ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾ ಎಸ್ ಸಿ ಧರ್ಮಾಧಿಕಾರಿ ಮತ್ತು ಭಾರತಿ ಡಾಂಗ್ರೆ ಹೇಳಿದ್ದಾರೆ. 
ಜುಲೈ 2015ರ ಆದೇಶ ಪ್ರಶ್ನಿಸಿ ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
2009ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ ಐಪಿಎಲ್ ಆವೃತ್ತಿಯಲ್ಲಿ ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆ ಆಗಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.