ಮೊದಲ ಟೆಸ್ಟ್: ಬಾಂಗ್ಲಾದೇಶದ ವಿರುದ್ಧ ವಿಂಡೀಸ್ ಗೆ ಇನ್ನಿಂಗ್ಸ್, 219 ರನ್ ಗಳ ಭರ್ಜರಿ ಜಯ
ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಬಾಂಗ್ಲಾದೇಶ ಇನ್ನಿಂಗ್ಸ್ ಮತ್ತು 219ರನ್ ಗಳ ಅಂತರದ ಹೀನಾಯ ಸೋಲು ಕಂಡಿದೆ.

Published On :
ಆ್ಯಂಟಿಗುವಾ: ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಬಾಂಗ್ಲಾದೇಶ ಇನ್ನಿಂಗ್ಸ್ ಮತ್ತು 219ರನ್ ಗಳ ಅಂತರದ ಹೀನಾಯ ಸೋಲು ಕಂಡಿದೆ.
ಮೊದಲ ಇನ್ನಿಂಗ್ಸ್ ನ ದಾಖಲೆಯ 43 ರನ್ ಗಳ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದ್ದ ಬಾಂಗ್ಲಾದೇಶ ಇಂದು ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ ಮತ್ತೆ ಕೇವಲ 144 ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ ವಿಂಡೀಸ್ ವಿರುದ್ಧ ಇನ್ನಿಂಗ್ಸ್ ಮತ್ತು 219 ರನ್ ಗಳ ಹೀನಾಯ ಸೋಲುಕಂಡಿತು.
ವಿಂಡೀಸ್ ವೇಗಿಗಳ ಅಬ್ಬರದ ಬೌಲಿಂಗ್ ಮುಂದೆ ಬಾಂಗ್ಲಾ ಬ್ಯಾಟ್ಸಮನ್ ಮಂಕಾಗಿದ್ದು, ಬಾಂಗ್ಲಾದೇಶದ ಹೀನಾಯ ಸೋಲಿಗೆ ಕಾರಣವಾಯಿತು. ಎರಡನೇ ಇನ್ನಿಂಗ್ಸ್ ನಲ್ಲಿ ನುರುಲ್ ಹಸನ್ ಗಳಿಸಿದ 64 ರನ್ ಗಳೇ ಆ ತಂಡದ ಪರ ಬ್ಯಾಟ್ಸಮನ್ ಓರ್ವ ಸಿಡಿಸಿದ ವೈಯುಕ್ತಿಕ ಗರಿಷ್ಠ ರನ್ ಗಳಿಕೆಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Recordದಾಖಲೆಬಾಂಗ್ಲಾದೇಶBangladeshWest indiesವೆಸ್ಟ್ ಇಂಡೀಸ್Antiguaಆ್ಯಂಟಿಗುವಾಕಳಪೆ ಪ್ರದರ್ಶನlowest Score
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


