ಟಿ20 ಸರಣಿ ಗೆಲುವಿನಲ್ಲೂ ದಾಖಲೆ ಬರೆದ ಭಾರತ, ಸತತ 6 ಸರಣಿ ಜಯ
ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಜೈತ್ರಯಾತ್ರೆ ಮುಂದುವರೆದಿದ್ದು, ಇಂಗ್ಲೆಂಡ್ ವಿರುದ್ಧ ಸರಣಿಯನ್ನು ಕೈ ವಶ ಮಾಡಿಕೊಳ್ಳುವ ಮೂಲಕ ಭಾರತ ತಂಡ ಸತತ 6 ಟಿ20 ಸರಣಿ ಗೆದ್ದ ಸಾಧನೆ ಮಾಡಿದೆ.
Published On :
ಬ್ರಿಸ್ಟೋಲ್: ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಜೈತ್ರಯಾತ್ರೆ ಮುಂದುವರೆದಿದ್ದು, ಇಂಗ್ಲೆಂಡ್ ವಿರುದ್ಧ ಸರಣಿಯನ್ನು ಕೈ ವಶ ಮಾಡಿಕೊಳ್ಳುವ ಮೂಲಕ ಭಾರತ ತಂಡ ಸತತ 6 ಟಿ20 ಸರಣಿ ಗೆದ್ದ ಸಾಧನೆ ಮಾಡಿದೆ.
ಹೌದು.. ಇಂದು ಬ್ರಿಸ್ಟೋಲ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿಯನ್ನು ತನ್ನ ಕೈ ವಶ ಮಾಡಿಕೊಂಡಿದೆ. ಟೀಂ ಇಂಡಿಯಾಗೆ ಇದು ಸತತ 6ನೇ ಟಿ20 ಸರಣಿ ಜಯವಾಗಿದ್ದು, ಈ ಹಿಂದೆ ಭಾರತ ತಂಡ ನ್ಯೂಜಿಲೆಂಡ್, ಶ್ರೀಲಂಕಾ, ದಕ್ಷಿಣ ಆಫ್ರಿಕಾ, ನಿಡಹಾಸ್ ತ್ರಿಕೋನ ಸರಣಿ, ಐರ್ಲೆಂಡ್ ವಿರುದ್ಧದ ಟಿ20 ಸರಣಿಗಳನ್ನು ಗೆದ್ದುಕೊಂಡಿತ್ತು.
ಇದೀಗ ಇಂಗ್ಲೆಂಡ್ ವಿರುದ್ಧ ದ್ವಿಪಕ್ಷೀಯ ಟಿ20 ಸರಣಿಯನ್ನೂ ಗೆಲ್ಲುವ ಮೂಲಕ ಭಾರತ ತಂಡ ಸತತ 6 ಟಿ20 ಸರಣಿ ಗೆದ್ದ ದಾಖಲೆ ಬರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತRohit Sharmaರೋಹಿತ್ ಶರ್ಮಾಇಂಗ್ಲೆಂಡ್EnglandCricket Offbeatಕ್ರಿಕೆಟ್ ಸ್ವಾರಸ್ಯ3rd T203ನೇ ಏಕದಿನBristolಬ್ರಿಸ್ಟೋಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

