ಕ್ರಿಕೆಟ್

ಆಂಗ್ಲರಿಗೆ ಸಿಂಹಸ್ವಪ್ನರಾದ ಕುಲ್ದೀಪ್ ಯಾದವ್ ಟೆಸ್ಟ್ ತಂಡದ ಆಯ್ಕೆ ನಿರೀಕ್ಷೆಯಲ್ಲಿ!

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಹಾಗೂ ಮೊದಲ ಏಕದಿನ ಪಂದ್ಯದಲ್ಲಿ ವಿಕೆಟ್ ಪಡೆಯುವ ಮೂಲಕ ತಂಡ ಪಂದ್ಯ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ...

ಆಂಗ್ಲರಿಗೆ ಸಿಂಹಸ್ವಪ್ನರಾದ ಕುಲ್ದೀಪ್ ಯಾದವ್ ಟೆಸ್ಟ್ ತಂಡದ ಆಯ್ಕೆ ನಿರೀಕ್ಷೆಯಲ್ಲಿ!
ಕುಲದೀಪ್ ಯಾದವ್
Published On :
ನಾಟಿಂಗ್ ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಹಾಗೂ ಮೊದಲ ಏಕದಿನ ಪಂದ್ಯದಲ್ಲಿ ವಿಕೆಟ್ ಪಡೆಯುವ ಮೂಲಕ ತಂಡ ಪಂದ್ಯ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಚೈನಾಮನ್ ಖ್ಯಾತಿಯ ಕುಲ್ದೀಪ್ ಯಾದವ್ ಟೆಸ್ಟ್ ತಂಡದ ಆಯ್ಕೆಯ ನಿರೀಕ್ಷೆಯಲ್ಲಿದ್ದಾರೆ. 
ನಿನ್ನೆ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕುಲ್ದೀಪ್ 25 ರನ್ ಗಳಿಗೆ ಆರು ವಿಕೆಟ್ ಪಡೆದಿದ್ದರು. ಇನ್ನು ಮೊದಲ ಟಿ20 ಪಂದ್ಯದಲ್ಲಿ ಕುಲ್ದೀಪ್ 24 ರನ್ ಗಳಿಗೆ 5 ವಿಕೆಟ್ ಪಡೆದು ಸಾಧನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮುಂಬವರು ಟೆಸ್ಟ್ ಪಂದ್ಯಕ್ಕೆ ತಮ್ಮನ್ನು ಆಯ್ಕೆ ಮಾಡುವ ನಿರೀಕ್ಷೆಯನ್ನು ಕುಲ್ದೀಪ್ ಹೊಂದಿದ್ದಾರೆ. 
ಮೂರು ಪಂದ್ಯಗಳ ಏಕದಿನ ಸರಣಿ ಮುಕ್ತಾಯದ ಬಳಿಕ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ ಆಡಲಿದೆ. ಈ ಹಿನ್ನೆಲೆಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಕುಲ್ದೀಪ್ ಯಾದವ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗುವ ನಿರೀಕ್ಷೆ ಹೊಂದಿದ್ದಾರೆ. 
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 8 ವಿಕೆಟ್ ಗಳಿಂದ ಜಯ ಗಳಿಸಿದೆ. ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಶತಕ ಹಾಗೂ ಕುಲ್ದೀಪ್ ಯಾದವ 6 ವಿಕೆಟ್ ಗಳ ಸಾಧನೆ ತಂಡ ಗೆಲುವಿಗೆ ಕಾರಣವಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.