ಕ್ರಿಕೆಟ್

ಸ್ಮಿತ್ ರಣಾಂಗಣದಲ್ಲಿ ಇಲ್ಲ ಅದಕ್ಕೆ ಕೊಹ್ಲಿ ಪ್ರಸ್ತುತ ಅತ್ಯುತ್ತಮ ಬ್ಯಾಟ್ಸ್ ಮನ್: ಪಾಂಟಿಂಗ್

ಚೆಂಡು ವಿರೂಪ ಪ್ರಕರಣದಲ್ಲಿ ನಿಷೇಧಕ್ಕೆ ಗುರಿಯಾಗಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವನ್ ಸ್ಮಿತ್ ಆಡುತ್ತಿಲ್ಲ, ಹೀಗಾಗಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ...

ಸ್ಮಿತ್ ರಣಾಂಗಣದಲ್ಲಿ ಇಲ್ಲ ಅದಕ್ಕೆ ಕೊಹ್ಲಿ ಪ್ರಸ್ತುತ ಅತ್ಯುತ್ತಮ ಬ್ಯಾಟ್ಸ್ ಮನ್: ಪಾಂಟಿಂಗ್
ವಿರಾಟ್ ಕೊಹ್ಲಿ-ರಿಕಿ ಪಾಂಟಿಂಗ್
Published On :
ಮೆಲ್ಬೋರ್ನ್(ಆಸ್ಟ್ರೇಲಿಯಾ): ಚೆಂಡು ವಿರೂಪ ಪ್ರಕರಣದಲ್ಲಿ ನಿಷೇಧಕ್ಕೆ ಗುರಿಯಾಗಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವನ್ ಸ್ಮಿತ್ ಆಡುತ್ತಿಲ್ಲ, ಹೀಗಾಗಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪ್ರಸ್ತುತ ಅತ್ಯುತ್ತಮ ಬ್ಯಾಟ್ಸ್ ಮನ್ ಆಗಿದ್ದಾರೆ ಎಂದು ಆಸೀಸ್ ನ ಮಾಜಿ ನಾಯಕ ರಿಕಿ ಪಾಂಟಿಂಗ್ ಹೇಳಿದ್ದಾರೆ. 
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮೂರು ಮಾದರಿಯಲ್ಲೂ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಈಗಿದ್ದರು ರಿಕಿ ಪಾಂಟಿಂಗ್ ಮಾತ್ರ ಕೊಹ್ಲಿ ಪ್ರಸ್ತುತ ಜಗತ್ತಿನ ಅತ್ಯುತ್ತಮ ಬ್ಯಾಟ್ಸ್ ಮನ್ ಆಗಲು ಸ್ಟೀವನ್ ಸ್ಮಿತ್ ನಿಷೇಧದಲ್ಲಿರುವುದೇ ಕಾರಣ ಎಂದು ಹೇಳಿದ್ದಾರೆ. 
ಪ್ರಸ್ತುತ ಸ್ಟೀವನ್ ಸ್ಮಿತ್ ಆಡುತ್ತಿದ್ದರೆ ಆತನೆ ಜಗತ್ತಿನ ಅತ್ಯುತ್ತಮ ಬ್ಯಾಟ್ಸ್ ಮನ್ ಆಗಿರುತ್ತಿದ್ದರು. ಸ್ಮಿತ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ಹಲವು ಸರಣಿಗಳನ್ನು ಗೆದ್ದಿತ್ತು. ಮುಖ್ಯವಾಗಿ ಆ್ಯಷಸ್ ಸರಣಿ ಕೊಹ್ಲಿಗಿಂತ ಸ್ಮಿತ್ ಉತ್ತಮ ಬ್ಯಾಟ್ಸ್ ಮನ್ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು. 
ಟೆಸ್ಟ್ ಕ್ರಿಕೆಟ್ ನಲ್ಲಿ ಕೊಹ್ಲಿ 53.40ರ ಬ್ಯಾಟಿಂಗ್ ಸರಾಸರಿಯಲ್ಲಿ 21 ಶತಕ ಸಿಡಿಸಿದ್ದರೆ, ಸ್ಟೀವನ್ ಸ್ಮಿತ್ 61.37 ಬ್ಯಾಟಿಂಗ್ ಸರಾಸರಿಯಲ್ಲಿ 23 ಶತಕ ಸಿಡಿಸಿದ್ದಾರೆ. ಈ ಅಂಕಿಅಂಶಗಳನ್ನಿಟ್ಟುಕೊಂಡು ಪಾಂಟಿಂಗ್ ಸ್ಮಿತ್ ಅತ್ಯುತ್ತಮ ಬ್ಯಾಟ್ಸ್ ಮನ್ ಎಂದು ಹೇಳುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.