ಅತ್ಯುತ್ತಮ ಪ್ರದರ್ಶನ ಟೆಸ್ಟ್‌ನಲ್ಲೂ ಕುಲ್‌ದೀಪ್, ಚಹಾಲ್‌ರನ್ನು ಆಡಿಸಲು ಪ್ರೇರಕವಾಗಿದೆ: ಕೊಹ್ಲಿ
ಇಂಗ್ಲೆಂಡ್ ಪ್ರವಾಸದಲ್ಲಿ ಟಿ20 ಹಾಗೂ ಏಕದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಚೈನಾಮೆನ್ ಖ್ಯಾತಿಯ ಕುಲ್ದೀಪ್ ಯಾದವ್ ಹಾಗೂ ಯಜುವೇಂದ್ರ...

Published On :
ನಾಟಿಂಗ್ಹ್ಯಾಮ್: ಇಂಗ್ಲೆಂಡ್ ಪ್ರವಾಸದಲ್ಲಿ ಟಿ20 ಹಾಗೂ ಏಕದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಚೈನಾಮೆನ್ ಖ್ಯಾತಿಯ ಕುಲ್ದೀಪ್ ಯಾದವ್ ಹಾಗೂ ಯಜುವೇಂದ್ರ ಚಹಾಲ್ ಅವರ ಅತ್ಯುತ್ತಮ ಪ್ರದರ್ಶನದಿಂದಾಗಿ ಟೆಸ್ಟ್ ಸರಣಿಯಲ್ಲೂ ಅವರನ್ನು ಆಡಿಸಲು ಪ್ರೇಕರವಾಗಿದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಕುಲ್ದೀಪ್ ಯಾದವ್ ಅದಾಗಲೇ ಎರಡು ಟೆಸ್ಟ್ ಪಂದ್ಯದಲ್ಲಿ ಆಡಿದ್ದು ಎರಡು ಪಂದ್ಯಗಳಲ್ಲಿ 9 ವಿಕೆಟ್ ಪಡೆದಿದ್ದಾರೆ. ಆದರೆ ಯಜುವೇಂದ್ರ ಚಹಾಲ್ ಮಾತ್ರ ಮೊದಲ ಬಾರಿಗೆ ಟೆಸ್ಟ್ ಕ್ಯಾಪ್ ಧರಿಸಬೇಕಿದೆ.
ಟೆಸ್ಟ್ ಸರಣಿಗಾಗಿ ತಂಡದ ಆಯ್ಕೆಯಲ್ಲಿ ಏನು ಬೇಕಾದರೂ ಆಗಬಹುದು. ಕುಲ್ದೀಪ್ ಮತ್ತು ಚಹಾಲ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು ಇಬ್ಬರ ಬೌಲಿಂಗ್ ದಾಳಿಯನ್ನು ಎದುರಿಸಲು ಇಂಗ್ಲೆಂಡ್ ಆಟಗಾರರು ತಿಣುಕಾಡುತ್ತಿದ್ದಾರೆ. ಈ ಎರಡು ಅಸ್ತ್ರಗಳನ್ನು ಟೆಸ್ಟ್ ಸರಣಿಯಲ್ಲೂ ಬಳಸಿಕೊಳ್ಳಬೇಕಿದೆ ಎಂದು ಕೊಹ್ಲಿ ಹೇಳಿದ್ದಾರೆ.
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಜಯ ಗಳಿಸಿದ್ದು ಮುಂದಿನ ಪಂದ್ಯ ನಿರ್ಣಾಯಕ ಪಂದ್ಯವಾಗಿದೆ. ಹೀಗಾಗಿ ಸದ್ಯಕ್ಕೆ ಆ ಪಂದ್ಯಗಳ ಮೇಲೆ ಗಮನ ಹರಿಸಿದ್ದು ಆ ಪಂದ್ಯಗಲ್ಲಿ ಇಬ್ಬರ ಪ್ರದರ್ಶನ ಟೆಸ್ಟ್ ಸರಣಿ ಆಯ್ಕೆಗೆ ಮುಖ್ಯವಾಗುತ್ತದೆ ಎಂದು ಕೊಹ್ಲಿ ಹೇಳಿದ್ದಾರೆ.
ಐದು ದಿನಗಳ ಪಂದ್ಯದಲ್ಲಿ ಆಡಲು ಕುಲ್ದೀಪ್ ಯಾದವ್ ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ಕೊಹ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿYuzvendra Chahalಯಜುವೇಂದ್ರ ಚಹಾಲ್Kuldeep Yadavಕುಲ್ದೀಪ್ ಯಾದವ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


