ಎಂಎಸ್ ಧೋನಿ ಮತ್ತೊಂದು ದಾಖಲೆ, ತ್ರಿಶತಕ ಸಾಧನೆ!
ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತೊಂದು ದಾಖಲೆ ಬರೆದಿದ್ದಾರೆ...

Published On :
ಲಂಡನ್: ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತೊಂದು ದಾಖಲೆ ಬರೆದಿದ್ದಾರೆ.
ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಆಗಿರುವ ಎಂಎಸ್ ಧೋನಿ ತ್ರಿಶತಕ ಬಾರಿಸಿದ್ದಾರೆ. ಧೋನಿ ತ್ರಿಶತಕ ಬಾರಿಸಿರುವುದು ಬ್ಯಾಟಿಂಗ್ ನಲ್ಲಲ್ಲ. ಕ್ಯಾಚ್ ನಲ್ಲಿ. ಹೌದು ಧೋನಿ 300 ಕ್ಯಾಚ್ ಪಡೆದಿರುವ ಸಾಧನೆ ಮಾಡಿದ್ದಾರೆ.
300ನೇ ಕ್ಯಾಚ್ ಪಡೆಯುವ ಮೂಲಕ ಎಂಎಸ್ ಧೋನಿ ಅತೀ ಹೆಚ್ಚು ಕ್ಯಾಚ್ ಪಡೆದಿರುವ ವಿಕೆಟ್ ಕೀಪರ್ ಗಳ ಸಾಲಿನಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಆ್ಯಡಂ ಗಿಲ್ ಕ್ರಿಸ್ಟ್ 417 ಕ್ಯಾಚ್ ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಮಾರ್ಕ್ ಬೌಚರ್ 403 ಹಾಗೂ ಶ್ರೀಲಂಕಾದ ಕುಮಾರ ಸಂಗಕ್ಕರ 402 ಕ್ಯಾಚ್ ಗಳನ್ನು ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕ್ರಿಕೆಟ್ಟೀಂ ಇಂಡಿಯಾTeam IndiaMS DhoniRecordದಾಖಲೆಎಂಎಸ್ ಧೋನಿಇಂಗ್ಲೆಂಡ್EnglandCricket Offbeatಕ್ಯಾಚ್Catches
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


