ಇಂಗ್ಲೆಂಡ್ ಸರಣಿ: ಟೆಸ್ಟ್ ಗೆ ಮೊಹಮ್ಮದ್ ಶಮಿ, ರಿಷಭ್ ಪಂತ್ ಆಯ್ಕೆ ಸಾಧ್ಯತೆ
ವೇಗಿ ಜಸ್ಪ್ರಿತ್ ಬುಮ್ರಾ ಆ.1 ರಂದು ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಗೆ ಅಲಭ್ಯವಾಗುವ ಸಾಧ್ಯತೆ ಇದ್ದು, ಮೊಹಮ್ಮದ್ ಶಮಿಗೆ ಅವಕಾಶ ಸಿಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Published On :
ಚೆನ್ನೈ: ವೇಗಿ ಜಸ್ಪ್ರಿತ್ ಬುಮ್ರಾ ಆ.1 ರಂದು ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಗೆ ಅಲಭ್ಯವಾಗುವ ಸಾಧ್ಯತೆ ಇದ್ದು, ಮೊಹಮ್ಮದ್ ಶಮಿಗೆ ಅವಕಾಶ ಸಿಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಅಫ್ಘಾನಿಸ್ತಾನ ತಂಡದ ವಿರುದ್ಧದ ಪಂದ್ಯದಲ್ಲಿ ಫಿಟ್ನೆಸ್ ಕಾರಣದಿಂದಾಗಿ ಮೊಹಮ್ಮದ್ ಶಮಿ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಈಗ ಫಿಟ್ನೆಸ್ ಟೆಸ್ಟ್ ನ್ನು ಮೊಹಮ್ಮದ್ ಶಮಿ ಸಂಪೂರ್ಣಗೊಳಿಸಿದ್ದು, ಬುಧವಾರ ಅಥವಾ ಗುರುವಾರ ಘೋಷಣೆಯಾಗುವ ತಂಡದ ಪಟ್ಟಿಯಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಬುಮ್ರಾ ಅವರನ್ನು ತಂಡದ ಪಟ್ಟಿಯಲ್ಲಿ ಘೋಷಣೆ ಮಾಡಲಾಗುತ್ತದೆಯಾದರೂ, ಇನ್ನೂ ಎರಡು ಟೆಸ್ಟ್ ಗಳಿಗೆ ಅಲಭ್ಯವಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದರೆ ಇದಕ್ಕೂ ಮುನ್ನ ಬುಮ್ರಾ ಅವರು ಫಿಟ್ನೆಸ್ ಟೆಸ್ಟ್ ನ್ನುತೆಗೆದುಕೊಳ್ಳಬೇಕಿದೆ.
ಇನ್ನು ಕೀಪರ್ ವೃದ್ಧಿಮಾನ್ ಸಹಾ ಸಹ ಗಾಯದಿಂದ ಬಳಲುತ್ತಿದ್ದು, ತಂಡದ ಭಾಗವಾಗುವ ಸಾಧ್ಯತೆ ಕಡಿಮೆ ಇದೆ, ನಂತರದ ಸಾಧ್ಯತೆಗಳು ದಿನೇಶ್ ಕಾರ್ತಿಕ್ ಅವರಿಗೆ ಎನ್ನಲಾಗುತ್ತಿದೆ. ಆದರೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ರಿಷಭ್ ಪಂತ್ ಪ್ರಥಮ ಬಾರಿಗೆ ಟೆಸ್ಟ್ ಆಡಲಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Mohammed Shamiಮೊಹಮ್ಮದ್ ಶಮಿRishabh PantIndia-Englandಭಾರತ-ಇಂಗ್ಲೆಂಡ್ರಿಷಭ್ ಪಂತ್Test Series 2018ಟೆಸ್ಟ್ ಸರಣಿ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


