ದಾಖಲೆಗಳ ವೀರ ವಿವಿಯನ್ ರಿಚರ್ಡ್ಸ್, ಕೊಹ್ಲಿ ದಾಖಲೆ ಮುರಿದ ಪಾಕ್ ಕ್ರಿಕೆಟಿಗ!
ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ ಮನ್ ಫಖರ್ ಜಮಾನ್ ಜಿಂಬಾಬ್ವೆ ವಿರುದ್ದದ ಏಕದಿನ ಪಂದ್ಯದಲ್ಲಿ ದ್ವಿಶತಕ ಸಿಡಿಸಿ ದಾಖಲೆ ಬರೆದಿದ್ದು ಇದೀಗ ಮತ್ತೊಂದು ವಿಶ್ವದಾಖಲೆ ಸೃಷ್ಟಿಸಿದ್ದಾರೆ...

Published On :
ಬುಲವಾಯೋ: ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ ಮನ್ ಫಖರ್ ಜಮಾನ್ ಜಿಂಬಾಬ್ವೆ ವಿರುದ್ದದ ಏಕದಿನ ಪಂದ್ಯದಲ್ಲಿ ದ್ವಿಶತಕ ಸಿಡಿಸಿ ದಾಖಲೆ ಬರೆದಿದ್ದು ಇದೀಗ ಮತ್ತೊಂದು ವಿಶ್ವದಾಖಲೆ ಸೃಷ್ಟಿಸಿದ್ದಾರೆ.
ಫಖರ್ ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗವಾಗಿ 1000 ರನ್ ಪೂರೈಸಿ ಸಾಧನೆ ಮಾಡಿದ್ದು ಅನೇಕ ಕ್ರಿಕೆಟಿಗರ ದಾಖಲೆಯನ್ನು ಸರಿಗಟ್ಟಿದ್ದಾರೆ. ಫಖರ್ ಕೇವಲ 18 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದು ಈ ಮೂಲಕ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ.
ಈ ಹಿಂದೆ ಕ್ರಿಕೆಟ್ ದಿಗ್ಗಜ, ವೆಸ್ಟ್ ಇಂಡೀಸ್ ತಂಡದ ಆಟಗಾರ ವಿವಿಯನ್ ರಿಚರ್ಡ್ಸ್, ಇಂಗ್ಲೆಂಡ್ ನ ಕೆವಿನ ಪೀಟರ್ಸನ್, ಜೋನಾಥನ್ ಟ್ರಾಟ್, ದಕ್ಷಿಣಾ ಆಫ್ರಿಕಾದ ಕ್ರಿಂಟನ್ ಡಿಕಾಕ್ ಹಾಗೂ ಪಾಕಿಸ್ತಾನ ಬಾಬರ್ ಅಜಮ್ ಅವರು 21 ಇನ್ನಿಂಗ್ಸ್ ನಲ್ಲಿ 1000 ರನ್ ಪೂರೈಸಿದ್ದರು. ಇನ್ನು ವಿರಾಟ್ ಕೊಹ್ಲಿ 24 ಇನ್ನಿಂಗ್ಸ್ ನಲ್ಲಿ 1000 ರನ್ ಕಲೆ ಹಾಕಿದ್ದರು.
2017ರಲ್ಲಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ಫಖರ್ ಜಮಾನ್ 18 ಏಕದಿನ ಪಂದ್ಯಗಳಲ್ಲಿ ಮೂರು ಶತಕ ಮತ್ತು ಐದು ಅರ್ಧಶತಕ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Pakistanಪಾಕಿಸ್ತಾನVirat Kohliವಿರಾಟ್ ಕೊಹ್ಲಿFakhar Zamanಫಖರ್ ಜಮಾನ್Vivian Richardsವಿವಿಯನ್ ರಿಚರ್ಡ್ಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


