ಕ್ರಿಕೆಟ್

ಕ್ರಿಕೆಟ್: ಏಷ್ಯಾ ಕಪ್ 2018 ವೇಳಾಪಟ್ಟಿ ಪ್ರಕಟ; ಭಾರತ-ಪಾಕ್ ಕದನಕ್ಕೆ ಮುಹೂರ್ತ ಫಿಕ್ಸ್

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ 2018ರ ವೇಳಾಪಟ್ಟಿ ಪ್ರಕಟವಾಗಿದ್ದು, ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ ವೋಲ್ಟೇಜ್ ಕದನಕ್ಕೆ ಸೆಪ್ಟೆಂಬರ್ 19ರಂದು ಮುಹೂರ್ತ ಫಿಕ್ಸ್ ಆಗಿದೆ.

ಕ್ರಿಕೆಟ್: ಏಷ್ಯಾ ಕಪ್ 2018 ವೇಳಾಪಟ್ಟಿ ಪ್ರಕಟ; ಭಾರತ-ಪಾಕ್ ಕದನಕ್ಕೆ ಮುಹೂರ್ತ ಫಿಕ್ಸ್
ಸಂಗ್ರಹ ಚಿತ್ರ
Published On :
ನವದೆಹಲಿ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ 2018ರ ವೇಳಾಪಟ್ಟಿ ಪ್ರಕಟವಾಗಿದ್ದು, ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ ವೋಲ್ಟೇಜ್ ಕದನಕ್ಕೆ ಸೆಪ್ಟೆಂಬರ್ 19ರಂದು ಮುಹೂರ್ತ ಫಿಕ್ಸ್ ಆಗಿದೆ.
2018ನೇ ಸಾಲಿನ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಡುಗಡೆಗೊಳಿಸಿದೆ. ಯುಎಇ ಆತಿಥ್ಯ ವಹಿಸುತ್ತಿರುವ 2018ರ ಏಷ್ಯಾ ಕಪ್‌ನಲ್ಲಿ ಹಾಲಿ ಚಾಂಪಿಯನ್ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಆಫ್ಘಾನಿಸ್ತಾನ ಸೇರಿದಂತೆ ಒಟ್ಟು ಆರು ತಂಡಗಳು ಭಾಗವಹಿಸುತ್ತಿದೆ. ಆರು ತಂಡಗಳನ್ನು ಒಟ್ಟು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. 'ಎ' ಗುಂಪಿನಲ್ಲಿ ಭಾರತ, ಪಾಕಿಸ್ತಾನ ಸೇರಿದಂತೆ ಕ್ವಾಲಿಫೈಯರ್ (ಇನ್ನಷ್ಟೇ ಅರ್ಹತೆ ಪಡೆಯಬೇಕಿದೆ) ತಂಡವೊಂದು ಇರಲಿದೆ. ಹಾಗೆಯೇ 'ಬಿ' ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನ ತಂಡಗಳು ಸ್ಥಾನ ಗಿಟ್ಟಿಸಿಕೊಂಡಿದೆ.
ಇನ್ನು ಕ್ವಾಲಿಫೈಯರ್ ಹಂತದಲ್ಲಿ ಯುಎಇ, ಸಿಂಗಾಪುರ, ಒಮಾನ್, ನೇಪಾಳ, ಮಲೇಷ್ಯಾ ಹಾಗೂ ಹಾಂಕಾಂಗ್ ತಂಡಗಳು ಪೈಪೋಟಿ ನಡೆಸಲಿದ್ದು, ಈ ತಂಡಗಳ ಪೈಕಿ ಒಂದು ತಂಡ ಏಷ್ಯಾಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ.
ಸೆಪ್ಟೆಂಬರ್ 15ರಂದು 2018ರ ಏಷ್ಯಾ ಕಪ್‌ ಟೂರ್ನಿಗೆ ಚಾಲನೆ ದೊರಕಲಿದ್ದು, ಟೂರ್ನಿಯ ಉದ್ಘಾಟನಾ ಪಂದ್ಯ ದುಬೈನಲ್ಲಿ ನಡೆಯಲಿದ್ದು, ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗುತ್ತಿವೆ. ಇನ್ನು ದುಬೈನಲ್ಲಿ ಸೆಪ್ಟೆಂಬರ್ 28ರಂದು ಫೈನಲ್ ಪಂದ್ಯ ನಡೆಯಲಿದೆ.  ಸೆಪ್ಟೆಂಬರ್ 18ರಂದು ಕ್ವಾಲಿಫೈಯರ್ ವಿರುದ್ಧ ಮೊದಲ ಪಂದ್ಯವನ್ನಾಡುವ ಭಾರತ ಸೆಪ್ಟೆಂಬರ್ 19ರಂದು ಸಾಂಪ್ರದಾಯಿಕ ಬದ್ಧ ವೈರಿ ಪಾಕಿಸ್ತಾನ ಸವಾಲನ್ನು ಎದುರಿಸಲಿದೆ. ಈ ಮೂಲಕ ವಿರಾಮವಿಲ್ಲದೆ ಸತತ ಎರಡು ಪಂದ್ಯಗಳನ್ನು ಆಡಲಿದೆ.
ಪ್ರತಿ ಗುಂಪಿನಿಂದಲೂ ಅಗ್ರ ಎರಡು ತಂಡಗಳು 'ಸೂಪರ್ ಫೋರ್' ಹಂತಕ್ಕೆ ತೇರ್ಗಡೆಯನ್ನು ಹೊಂದಲಿದೆ. ಬಳಿಕ ಅಗ್ರ ಎರಡು ತಂಡಗಳು ಪ್ರಶಸ್ತಿಗಾಗಿ ಸೆಣಸಲಿದೆ. 
ಏಷ್ಯಾಕಪ್ ಟೂರ್ನಿಯ ವೇಳಾ ಪಟ್ಟಿ ಇಂತಿದೆ:
Story image

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.