ನಂಬರ್ 1 ಟೀಂ ಇಂಡಿಯಾ ಮಣಿಸಲು ನಿವೃತ್ತಿಯಾಗಿದ್ದ ಆಟಗಾರನ ಕರೆತಂದ ಇಂಗ್ಲೆಂಡ್!
ಮುಂಬರುವ ಟೆಸ್ಟ್ ಸರಣಿಯಲ್ಲಿ ವಿಶ್ವದ ನಂಬರ್ 1 ತಂಡ ಟೀಂ ಇಂಡಿಯಾವನ್ನು ಮಣಿಸಲು ಪಣತೊಟ್ಟಿರುವ ಇಂಗ್ಲೆಂಡ್ ತಂಡ ಈಗಾಗಲೇ ಟೆಸ್ಟ್ ಕ್ರಿಕೆಟ್ ನಿವೃತ್ತಿ ಘೋಷಿಸಿರುವ ಸ್ಪಿನ್ನರ್ ಅನ್ನು ಮೊದಲ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡುವ ಅಚ್ಚರಿ ಮೂಡಿಸಿದೆ.

Published On :
ಲಂಡನ್: ಮುಂಬರುವ ಟೆಸ್ಟ್ ಸರಣಿಯಲ್ಲಿ ವಿಶ್ವದ ನಂಬರ್ 1 ತಂಡ ಟೀಂ ಇಂಡಿಯಾವನ್ನು ಮಣಿಸಲು ಪಣತೊಟ್ಟಿರುವ ಇಂಗ್ಲೆಂಡ್ ತಂಡ ಈಗಾಗಲೇ ಟೆಸ್ಟ್ ಕ್ರಿಕೆಟ್ ನಿವೃತ್ತಿ ಘೋಷಿಸಿರುವ ಸ್ಪಿನ್ನರ್ ಅನ್ನು ಮೊದಲ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡುವ ಅಚ್ಚರಿ ಮೂಡಿಸಿದೆ.
ಹೌದು.. ಇದೇ ಆಗಸ್ಟ್ 1 ರಿಂದ ಆರಂಭಗೊಳ್ಳಲಿರುವ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿಯಾಗಿರುವ ಆದಿಲ್ ರಶೀದ್ ಬುಲಾವ್ ನೀಡಿದೆ. ಇಂಗ್ಲೆಂಡ್ ನ ಎಡ್ಜ್ ಬ್ಯಾಸ್ಟನ್ ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಅದಿಲ್ ರಷೀದ್ ರನ್ನು ಆಯ್ಕೆ ಮಾಡಿದೆ. ಆ ಮೂಲಕ ನಿವೃತ್ತಿ ಘೋಷಿಸಿದ್ದ ಅದಿಲ್ ರಷೀದ್ ರನ್ನು ಮತ್ತೆ ಟೆಸ್ಟ್ ಕ್ರಿಕೆಟ್ ಗೆ ಇಂಗ್ಲೆಂಡ್ ತಂಡ ವಾಪಸ್ ಕರೆಸಿಕೊಂಡಿದೆ.
ಇಂಗ್ಲೆಂಡ್ ಪಿಚ್ಗಳಲ್ಲಿ ವೇಗದ ಜತೆಗೆ ಸ್ಪಿನ್ ಮೂಲಕವೂ ಭಾರತವನ್ನು ಕಟ್ಟಿ ಹಾಕಲು ಇಂಗ್ಲೆಂಡ್ ಪ್ಲಾನ್ ಮಾಡಿಕೊಂಡಿದ್ದು, ಹಾಗಾಗಿ ರಶೀದ್ರನ್ನು ಮತ್ತೆ ವಾಪಸ್ ಕರೆಸಿಕೊಳ್ಳಲಾಗಿದೆ. ಇತ್ತೀಚೆಗೆ ನಡೆದ ಭಾರತ ವಿರುದ್ಧ ಏಕದಿನ ಸರಣಿಯಲ್ಲಿ ರಶೀದ್ ಉತ್ತಮ ಪ್ರದರ್ಶನ ನೀಡಿದ್ದರು. ಭಾರತದ ಪ್ರಮುಖ ವಿಕೆಟ್ ಕಿತ್ತು ಏಕದಿನ ಸರಣಿ ವಶ ಪಡಿಸಿಕೊಳ್ಳಲು ಸಹಕರಿಸಿದ್ದರು. ಪ್ರಮುಖವಾಗಿ ಭಾರತದ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರನ್ನು ಅದಿಲ್ ರಷೀದ್ ಔಟ್ ಮಾಡಿದ್ದ ಪರಿ ಕ್ರಿಕೆಟ್ ಪ್ರೇಮಿಗಳ ಅಚ್ಚರಿಗೆ ಕಾರಣವಾಗಿತ್ತು. ಹೀಗಾಗಿ ಅದಿಲ್ ರಷೀದ್ ರಿಂದ ಇದೇ ರೀತಿಯ ಪ್ರದರ್ಶನವನ್ನು ಟೆಸ್ಟ್ ಸರಣಿಯಲ್ಲೂ ಇಂಗ್ಲೆಂಡ್ ತಂಡ ನಿರೀಕ್ಷಿಸುತ್ತಿದೆ.
ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಇಂಗ್ಲೆಂಡ್ ತಂಡ ಇಂತಿದೆ.
ಜೋ ರೂಟ್ (ನಾಯಕ), ಅಲಸ್ಟರ್ ಕುಕ್, ಕೀಟನ್ ಜೆನ್ನಿಂಗ್ಸ್, ಡೇವಿಡ್ ಮಲಾನ್, ಜಾನಿ ಬೇರ್ ಸ್ಟೋ (ವಿಕೆಟ್ ಕೀಪರ್), ಬೆನ್ ಸ್ಟೋಕ್ಸ್, ಮೊಯಿನ್ ಅಲಿ, ಜಾಸ್ ಬಟ್ಲರ್, ಅದಿಲ್ ರಷೀದ್, ಸ್ಯಾಮ್ ಕುರನ್, ಸ್ಟುವರ್ಟ್ ಬ್ರಾಡ್, ಜಿಮ್ಮಿ ಆಂಡರ್ಸನ್, ಜಾಮಿ ಪೋರ್ಟರ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Londonಲಂಡನ್indiaಭಾರತಇಂಗ್ಲೆಂಡ್EnglandEdgbaston TestAdil Rashidಎಡ್ಜ್ ಬ್ಯಾಸ್ಟನ್ ಟೆಸ್ಟ್ಅದಿಲ್ ರಷೀದ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


