ಟಿ20 ಕ್ರಿಕೆಟ್‍ನಲ್ಲಿ ವೇಗದ ಅರ್ಧ ಶತಕ ಸಿಡಿಸಿ ದಾಖಲೆ ಬರೆದ ಸ್ಮೃತಿ ಮಂಧನ!
ಕೆಐಎ ಸೂಪರ್ ಲೀಗ್(ಕೆಎಸ್ಎಲ್) ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಮಹಿಳಾ ಆಟಗಾರ್ತಿ ಸ್ಮೃತಿ ಮಂಧನ ವೇಗದ ಅರ್ಧ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ...

Published On :
ಟೌನ್ಟನ್: ಕೆಐಎ ಸೂಪರ್ ಲೀಗ್(ಕೆಎಸ್ಎಲ್) ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಮಹಿಳಾ ಆಟಗಾರ್ತಿ ಸ್ಮೃತಿ ಮಂಧನ ವೇಗದ ಅರ್ಧ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.
ಇಂಗ್ಲೆಂಡ್ ನ ಟೌನ್ಟನ್ ನಲ್ಲಿ ನಿನ್ನೆ ನಡೆದ ಕೆಎಸ್ಎಲ್ ಟಿ20 ಪಂದ್ಯದಲ್ಲಿ ವೆಸ್ಟರ್ನ್ ಸ್ಟೋಮ್ ತಂಡದ ಪರ ಆಡುತ್ತಿರುವ ಸ್ಮೃತಿ 18 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿದ್ದಾರೆ.
ಇನ್ನು ಸ್ಮೃತಿ ಮಂಧನ ವೇಗದ ಅರ್ಧ ಶತಕ ಸಿಡಿಸಿದ್ದು ಇದರ ಸದಾಯದಿಂದ ವೆಸ್ಟರ್ನ್ ಸ್ಟೋಮ್ ತಂಡ ಲಾಘ್ಬೊರಫ್ ಲೈಟನಿಂಗ್ ವಿರುದ್ಧ ಗೆಲುವು ಸಾಧಿಸಿದೆ.
ಇನ್ನು ಮಹಿಳೆಯರ ಟಿ20 ಕ್ರಿಕೆಟ್ ನಲ್ಲಿ ವೇಗದ ಅರ್ಧ ಶತಕ ಸಿಡಿಸಿದ ದಾಖಲೆ ನ್ಯೂಜಿಲೆಂಡ್ ತಂಡದ ಆಟಗಾರ್ತಿ ಸೋಫಿ ಡೆವಿನ್ ಹೆಸರಲ್ಲಿದೆ. ಸೋಫಿ ಭಾರತ ಮಹಿಳಾ ತಂಡದ ವಿರುದ್ಧ 18 ಎಸೆತಗಳಲ್ಲಿ ಅರ್ಧ ಶತಕ ಪೂರೈಸಿದ್ದರು. ಇದೀಗ ಸ್ಮೃತಿ ಮಂಧನ ಸೋಫಿ ದಾಖಲೆಯನ್ನು ಸಮಗಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaCricket Offbeatಕ್ರಿಕೆಟ್ ಸ್ವಾರಸ್ಯSmriti MandhanaFastest Half CenturyWomens T20ಸ್ಮೃತಿ ಮಂಧನವೇಗದ ಅರ್ಧ ಶತಕಮಹಿಳಾ ಟಿ20
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


