ವೃದ್ಧಿಮಾನ್ ಸಾಹಾಗೆ ಗಾಯ ಆಫ್ಘಾನಿಸ್ತಾನ ವಿರುದ್ಧದ ಚೊಚ್ಚಲ ಟೆಸ್ಟ್‌ಗೆ ದಿನೇಶ್ ಕಾರ್ತಿಕ್
ಟೀಂ ಇಂಡಿಯಾದ ಟೆಸ್ಟ್ ತಂಡದ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ ಅವರು ಗಾಯಗೊಂಡಿದ್ದು ಅವರ ಬದಲಿಗೆ ದಿನೇಶ್ ಕಾರ್ತಿಕ್ ಆಫ್ಘಾನಿಸ್ತಾನ ವಿರುದ್ಧದ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಗಿಟ್ಟಿಸಿದ್ದಾರೆ.

Published On :
ನವದೆಹಲಿ: ಟೀಂ ಇಂಡಿಯಾದ ಟೆಸ್ಟ್ ತಂಡದ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ ಅವರು ಗಾಯಗೊಂಡಿದ್ದು ಅವರ ಬದಲಿಗೆ ದಿನೇಶ್ ಕಾರ್ತಿಕ್ ಆಫ್ಘಾನಿಸ್ತಾನ ವಿರುದ್ಧದ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಗಿಟ್ಟಿಸಿದ್ದಾರೆ.
ಜೂನ್ 14ರಿಂದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಫ್ಘಾನಿಸ್ತಾನ ಟೀಂ ಇಂಡಿಯಾದ ವಿರುದ್ಧ ತನ್ನ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಲಿದೆ. ಹಲವು ವರ್ಷಗಳಿಂದ ಟೀಂ ಇಂಡಿಯಾದ ಟೆಸ್ಟ್ ತಂಡದಿಂದ ದೂರ ಉಳಿದಿದ್ದ ಹಿರಿಯ ಆಟಗಾರ ದಿನೇಶ್ ಕಾರ್ತಿಕ್ ಇದೀಗ ಮತ್ತೆ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ.
2007ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಉತ್ತಮ ಪ್ರದರ್ಶನ ನೀಡಿದ್ದರು. ಲಾರ್ಡ್ಸ್ 60, ನಾಟಿಂಗ್ ಹ್ಯಾಮ್ 77 ಮತ್ತು ಓವಲ್ ನಲ್ಲಿ 91 ರನ್ ಗಳಿಸಿದ್ದರು. ಈ ಉತ್ತಮ ಆಟದಿಂದಾಗಿ ಆಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ಆಯ್ಕೆ ಮಾಡಲು ಆಯ್ಕೆ ಸಮಿತಿಯ ಅಧ್ಯಕ್ಷ ಎಂಎಸ್ಕೆ ಪ್ರಸಾದ್ ಮತ್ತು ತಂಡ ತೀರ್ಮಾನಿಸಿದೆ.
ದಿನೇಶ್ ಕಾರ್ತಿಕ್ 2010ರಲ್ಲಿ ಬಾಂಗ್ಲಾದೇಶ ವಿರುದ್ಧ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಟೀಂ ಇಂಡಿಯಾದ ಪರ 23 ಟೆಸ್ಟ್ ಪಂದ್ಯಗಳನ್ನು ಆಡಿರುವ ಕಾರ್ತಿಕ್ 1000 ರನ್ ಸಿಡಿಸಿದ್ದಾರೆ. ಒಂದು ಶತಕ ಹಾಗೂ ಏಳು ಅರ್ಧ ಶತಕ ಸಿಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaBCCIಬಿಸಿಸಿಐAfghanistanಆಫ್ಘಾನಿಸ್ತಾನವೃದ್ಧಿಮಾನ್ ಸಾಹಾದಿನೇಶ್ ಕಾರ್ತಿಕ್Testಟೆಸ್ಟ್Wriddhiman SahaDinesh Karthik
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


